ಬೆಳಗಾವಿ ಗಡಿಯಲ್ಲಿ ಮತ್ತೆ ಮರಾಠಿ ತಗಾದೆ
ಗಡಿ ಭಾಗದಲ್ಲಿ ಮತ್ತೆ ಮರಾಠಿಗರ ತಗಾದೆ ಶುರುವಾಗಿದೆ. ಗಡಿಭಾಗದಲ್ಲಿ ವಾಸಿಸುತ್ತಿರುವ ಮರಾಠಿಗರಿಗೆ ಸರ್ಕಾರಿ ದಾಖಲೆ ನೀಡಬೇಕು. ಮರಾಠಿ ಸಾಹಿತ್ಯ ಸಮ್ಮೇಳನಗಳಿಗೆ...

ಬೆಳಗಾವಿ: ಗಡಿ ಭಾಗದಲ್ಲಿ ಮತ್ತೆ ಮರಾಠಿಗರ ತಗಾದೆ ಶುರುವಾಗಿದೆ. ಗಡಿಭಾಗದಲ್ಲಿ ವಾಸಿಸುತ್ತಿರುವ ಮರಾಠಿಗರಿಗೆ ಸರ್ಕಾರಿ ದಾಖಲೆ ನೀಡಬೇಕು. ಮರಾಠಿ ಸಾಹಿತ್ಯ ಸಮ್ಮೇಳನಗಳಿಗೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಬೇಕು, ಗಡಿ ವಿವಾದವನ್ನು ಸರ್ಕಾರ ಬಗೆಹರಿಸಬೇಕು ಎಂದು ಒತ್ತಾಯಿಸಿ ನಿನ್ನೆ ಯಳ್ಳೂರಿನಲ್ಲಿ ನಡೆದ ಗ್ರಾಮೀಣ ಸಾಹಿತ್ಯ ಸಮ್ಮೇಳನದಲ್ಲಿ ಅಂಗೀಕರಿಸಲಾಯಿತು.
ಯಳ್ಳೂರು ಗ್ರಾಮ ಇರುವುದು ಬೆಳಗಾವಿ ಗಡಿ ಭಾಗದಲ್ಲಿ. ಇಲ್ಲಿ ಮರಾಠಿ ಸಾಹಿತ್ಯ ಸಮ್ಮೇಳನವನ್ನು ಏರ್ಪಡಿಸಲಾಗಿತ್ತು. ಸುಮಾರು ಸಾವಿರ ಸಾಹಿತಿಗಳು ಮತ್ತು ಸಾಹಿತ್ಯಾಸಕ್ತರು ಭಾಗವಹಿಸಿದ್ದರು.
ಇತ್ತೀಚೆಗೆ ಸಿಯಾಚಿನ್ ಹಿಮಪಾತಕ್ಕೆ ಸಿಲುಕಿ ಸಾವನ್ನಪ್ಪಿದ ಯೋಧರಿಗೆ ಹಾಗೂ ಉಗ್ರರ ಗುಂಡಿಗೆ ಬಲಿಯಾದ ಸೈನಿಕ ಮಹಾರಾಷ್ಟ್ರದ ಸಂತೋಷ ಮಹಾಡಿಕ, ಸಹದೇವ ಮೋರೆ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ವೈಚಾರಿಕ ಸಂಘರ್ಷಕ್ಕೆ ಬಲಿಯಾದ ಗೋವಿಂದ ಪನ್ಸರೆ, ಡಾ.ಎಂ.ಎಂ.ಕಲಬುರ್ಗಿ ಹಂತಕರನ್ನು ಬಂಧಿಸಬೇಕೆಂದು ಸಭೆಯಲ್ಲಿ ಒಕ್ಕೊರಲಿನಿಂದ ಆಗ್ರಹಿಸಿದರು. ಗಡಿಭಾಗದ ಮರಾಠಿಗರಿಗೆ ಮರಾಠಿ ಪ್ರಾತಿನಿಧ್ಯ ನೀಡುವ ಅನೇಕ ಬೇಡಿಕೆಗಳನ್ನು ಕರ್ನಾಟಕ ಸರ್ಕಾರದ ಮುಂದಿಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


