ಪತ್ನಿ ಹೋಟೆಲ್ ಎದುರೇ ಕತ್ತು ಕುಯ್ದುಕೊಂಡ ಪತಿ ಆತ್ಮಹತ್ಯೆ
ಕೌಟುಂಬಿಕ ಕಲಹದಿಂದ ಬೇಸತ್ತು ವ್ಯಕ್ತಿಯೊಬ್ಬ ಪತ್ನಿ ನಡೆಸುತ್ತಿದ್ದ ಹೋಟೆಲ್ ಎದುರೇ ಕತ್ತು ಕುಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ...

Published On :
ಬೆಂಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತು ವ್ಯಕ್ತಿಯೊಬ್ಬ ಪತ್ನಿ ನಡೆಸುತ್ತಿದ್ದ ಹೋಟೆಲ್ ಎದುರೇ ಕತ್ತು ಕುಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೊಡಿಗೇಹಳ್ಳಿ ನಿವಾಸಿ ರಮೇಶ್(50) ಆತ್ಮಹತ್ಯೆ ಮಾಡಿಕೊಂಡಿವರು. ಹಲವು ವರ್ಷಗಳಿಂದ ಪತ್ನಿ ಮತ್ತು ಮಕ್ಕಳಿಂದ ದೂರವಿದ್ದ ರಮೇಶ್, ಹಾಸ್ಟೆಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದರು.
ಕೌಟುಂಬಿಕ ಕಲಹದಿಂದ ಭಾಗ್ಯಮ್ಮ ತನ್ನ ಮಕ್ಕಳೊಂದಿಗೆ ವಿದ್ಯಾರಣ್ಯಪುರದಲ್ಲಿ ಪ್ರತ್ಯೇಕವಾಗಿ ವಾಸವಾಗಿ, ಹೋಟೆಲ್ ನಡೆಸುತ್ತಿದ್ದರು. ಮಂಗಳವಾರ ಪತ್ನಿ ನಡೆಸುತ್ತಿದ್ದ ಹೋಟೆಲ್ ಮುಂದೆ ಬಂದು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಸ್ಥಳೀಯರು ತಡೆದಿದ್ದಾರೆ. ನಂತರ ಜೇಬಿನಲ್ಲಿದ್ದ ಚಾಕು ತೆಗೆದುಕೊಂಡು ಕತ್ತು ಕುಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಕ್ಷಣ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


