ಜಿಲ್ಲಾ ಸುದ್ದಿ

ಬೆಂಗಳೂರಿನಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕ ಪರಾರಿ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದೈಹಿಕ ಶಿಕ್ಷಣ ಶಿಕ್ಷಕನ ವಿರುದ್ಧ ಮಂಗಳವಾರ ಜಾಲಹಳ್ಳಿ ಪೊಲೀಸ್...

ಬೆಂಗಳೂರಿನಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕ ಪರಾರಿ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದೈಹಿಕ ಶಿಕ್ಷಣ ಶಿಕ್ಷಕನ ವಿರುದ್ಧ ಮಂಗಳವಾರ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
14 ವರ್ಷದ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆಂದು ಖಾಸಗಿ ಶಾಲೆಯ ದೈಹಿಕ ಶಿಕ್ಷಕ ಲಕ್ಷ್ಮೀಕಾಂತ್(40) ವಿರುದ್ಧ ದೂರು ದಾಖಲಾಗಿದೆ.
ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ(ಪೋಕ್ಸೊ) ಹಾಗೂ ಅತ್ಯಾಚಾರ (ಐಪಿಸಿ 376) ಆರೋಪದಡಿ ಪ್ರಕರಣ ದಾಖಲಾಗಿದೆ ಎಂದು ಉತ್ತರ ವಿಭಾಗದ ಡಿಸಿಪಿ ಟಿಆರ್ ಸುರೇಶ್ ತಿಳಿಸಿದ್ದಾರೆ. 
ಲಕ್ಷ್ಮೀಕಾಂತ್ ಕಳೆದ 6 -7 ತಿಂಗಳಿನಿಂದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಜಾಲಹಳ್ಳಿ ಬಳಿಯಿರುವ ಖಾಸಗಿ ಶಾಲೆಯಲ್ಲಿ ಕಳೆದು ಎಂಟು ವರ್ಷಗಳಿಂದ ಲಕ್ಷ್ಮೀಕಾಂತ್ ದೈಹಿಕ ಶಿಕ್ಷಣ ಶಿಕ್ಷಕನಾಗಿದ್ದಾನೆ. 
ವಿದ್ಯಾರ್ಥಿನಿಗೆ ಕೆಲವು ತಿಂಗಳಿನಿಂದ ಲೈಂಗಿಕ ಕಿರುಕುಳ ನೀಡುತ್ತಿದ್ದು, ಈ ವಿಷಯವನ್ನು ಬಹಿರಂಗಪಡಿಸಿದರೆ, ಅನುತ್ತೀರ್ಣಗೊಲಿಸುವುದಲ್ಲದೆ ಜೀವ ತೆಗೆಯುವುದಾಗಿ ಬೆದರಿಕೆ ಹಾಕಿದ್ದನು. ಬಾಲಕಿ ಇತ್ತೀಚೆಗೆ ಅಷ್ಟೇ ತನ್ನ ಗೆಳತಿಯೊಂದಿಗೆ ಈ ವಿಚಾರವನ್ನು ಹಂಚಿಕೊಂಡು ಕಣ್ಣೀರಿಟ್ಟಿದ್ದಾಳೆ. ಆಕೆಯ ಗೆಳತಿ ಕ್ಲಾಸ್ ಟೀಚರ್ ಮತ್ತು ಪೋಷಕರಿಗೆ ಮಾಹಿತಿ ನೀಡಿದ್ದಾಳೆ. ಪೋಷಕರು ಶಾಲಾ ಆಡಳಿತ ಮಂಡಳಿಯಲ್ಲಿ ದೂರು ದಾಖಲಿಸಿದ್ದು, ಪೊಲೀಸ್ ಠಾಣೆಗೂ ದೂರು ನೀಡಿದ್ದಾರೆ.
ಶಾಲಾ ಆಡಳಿತ ಮಂಡಳಿ ಲಕ್ಷ್ಮೀಕಾಂತ್ ನನ್ನು ಅಮಾನತುಗೊಳಿಸಿದೆ. ಇನ್ನು ತನ್ನ ಕೃತ್ಯ ಬೆಳಕಿಗೆ ಬಂದ ನಂತರ ಲಕ್ಷ್ಮೀಕಾಂತ್ ಪರಾರಿಯಾಗಿದ್ದಾನೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.