ಜಿಲ್ಲಾ ಸುದ್ದಿ

ಬೆಂಗಳೂರಿನಲ್ಲಿ ಆರು ವರ್ಷದ ಬಾಲಕಿ ಮೇಲೆ ಅಪ್ರಾಪ್ತನಿಂದ ಲೈಂಗಿಕ ದೌರ್ಜನ್ಯ

ಆರು ವರ್ಷದ ಬಾಲಕಿ ಮೇಲೆ ಅಪ್ರಾಪ್ತ ಬಾಲಕನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನಡೆದಿದೆ...

ಬೆಂಗಳೂರಿನಲ್ಲಿ ಆರು ವರ್ಷದ ಬಾಲಕಿ ಮೇಲೆ ಅಪ್ರಾಪ್ತನಿಂದ ಲೈಂಗಿಕ ದೌರ್ಜನ್ಯ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಆರು ವರ್ಷದ ಬಾಲಕಿ ಮೇಲೆ ಅಪ್ರಾಪ್ತ ಬಾಲಕನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನಡೆದಿದೆ.

ಲೈಂಗಿಕ ದೌರ್ಜನ್ಯ ವೆಸಗಿರುವ ಅಪ್ರಾಪ್ತ ಹುಡುಗ ಬಾಲಕಿಯ ಸಂಬಂಧಿಯಾಗಿದ್ದಾನೆ. ಇಬ್ಬರು ಪರಪ್ಪನ ಅಗ್ರಹಾರ ನಿವಾಸಿಗಳಾಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.

ಬಾಲಕಿಗೆ ಚಾಕಲೇಟು ನೀಡುವ ಆಮೀಷವೊಡ್ಡಿ ಈ ಕೃತ್ಯವೆಸಗಿದ್ದಾನೆ.  ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಬಾಲಕಿ ಜೋರಾಗಿ ಅಳುತ್ತಿದ್ದಾಗ ಆಕೆಯ ಪೋಷಕರು ಸಮಾಧಾನಪಡಿಸಲು ಯತ್ನಿಸಿದ್ದಾರೆ. ನಂತರ ಆಕೆ ಪೋಷಕರಿಗೆ ಹೊಟ್ಟೆ ನೋವು ಎಂದು ತಿಳಿಸಿದ್ದಾಳೆ.

ಕೂಡಲೇ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ವೈದ್ಯರು ತಿಳಿಸಿದ್ದಾರೆ. ನಂತರ ಬಾಲಕಿ ಪೋಷಕರು ಪರಪ್ಪನ ಅಗ್ರಹಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಾಲ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಆತನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.