ಇಂದು ಎರಡನೇ ಸುತ್ತಿನ ಪೋಲಿಯೋ ಲಸಿಕೆ
ಪಲ್ಸ್ ಪೋಲಿಯೋ ಅಭಿಯಾನದ ಎರಡನೇ ಸುತ್ತಿನ ಲಸಿಕಾ ಕಾರ್ಯಕ್ರಮ ಭಾನುವಾರ ನಡೆಯಲಿದೆ. ಬೆಂಗಳೂರು ಪಾಲಿಕೆ ವಲಯದಲ್ಲಿ 11 ಲಕ್ಷದ 34 ಸಾವಿರದ 573 ಮಂದಿ...

ಬೆಂಗಳೂರು: ಪಲ್ಸ್ ಪೋಲಿಯೋ ಅಭಿಯಾನದ ಎರಡನೇ ಸುತ್ತಿನ ಲಸಿಕಾ ಕಾರ್ಯಕ್ರಮ ಭಾನುವಾರ ನಡೆಯಲಿದೆ. ಬೆಂಗಳೂರು ಪಾಲಿಕೆ ವಲಯದಲ್ಲಿ 11 ಲಕ್ಷದ 34 ಸಾವಿರದ 573 ಮಂದಿ ಮಕ್ಕಳಿಗೆ ಲಸಿಕೆ ಹಾಕಲು ಆರೋಗ್ಯ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.
ದೇಶದಲ್ಲಿ ಪೋಲಿಯೋ ರೋಗವನ್ನು ನಿರ್ಮೂಲನೆ ಮಾಡಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಎರಡು ಹನಿ ಲಸಿಕೆ ನೀಡುವುದಾಗಿದೆ. ಇದರ ಪ್ರಯೋಜನ ನಮ್ಮ ದೇಶದಲ್ಲಿ ಒಳ್ಳೆಯ ಫಲಿತಾಂಶವನ್ನು ಕಂಡಿದೆ. 2011ರಿಂದೀಚೆಗೆ ಯಾವುದೇ ಪೋಲಿಯೋ ಪ್ರಕರಣ ವರದಿಯಾಗಿಲ್ಲ.
ಈ ವರ್ಷ ಜನವರಿ 17ರಂದು ಮೊದಲ ಸುತ್ತಿನ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 2ನೇ ಸುತ್ತಿನ ಲಸಿಕೆಯನ್ನು ಬಿಬಿಎಂಪಿ ವ್ಯಾಪ್ತಿಯ 198 ವಾರ್ಡ್ ಗಳಲ್ಲಿ ಹಾಕಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಎಲ್ಲೆಲ್ಲಿ ಲಸಿಕೆ ಹಾಕಲಾಗುತ್ತದೆ? ಪಾಲಿಕೆಯ ಆರೋಗ್ಯ ಕೇಂದ್ರಗಳು, ನಗರ ಕುಟುಂಬ ಕಲ್ಯಾಣ ಕೇಂದ್ರ, ಸರ್ಕಾರಿ ಆಸ್ಪತ್ರೆಗಳು, ಔಷಧಾಲಯಗಳು, ಅಂಗನವಾಡಿ ಕೇಂದ್ರಗಳು, ಕೆಲ ಆಯ್ದ ಶಾಲೆಗಳು, ಬಸ್ -ರೈಲು ನಿಲ್ದಾಣಗಳು, ಸ್ವಯಂ ಸೇವಾ ಸಂಸ್ಥೆಗಳ ಆಸ್ಪತ್ರೆಗಳು, ಮಾಲ್ ಗಳು, ಖಾಸಗಿ ನರ್ಸಿಂಗ್ ಹೋಂಗಳು, ವೈದ್ಯಕೀಯ ಕಾಲೇಜುಗಳು, ಉದ್ಯಾನವನಗಳು, ಮೆಟ್ರೋ ರೈಲು ನಿಲ್ದಾಣ, ಕೊಳಚೆ ಪ್ರದೇಶಗಳು, ಜನನಿಬಿಡ ಪ್ರದೇಶಗಳಲ್ಲಿ ಬೂತ್ ಗಳನ್ನು ತೆರೆಯಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


