ಜಿಲ್ಲಾ ಸುದ್ದಿ

ಬೆಂಗಳೂರಿನ ಮಾಳಗಾಳ ಫ್ಲೈಓವರ್ ಮೇಲೆ ಸರಣಿ ಅಪಘಾತ: ಇಬ್ಬರ ದುರ್ಮರಣ

ನಗರದ ಮಾಳಗಾಳ ಫ್ಲೈಓವರ್ ಮೇಲೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ...

ಬೆಂಗಳೂರಿನ ಮಾಳಗಾಳ ಫ್ಲೈಓವರ್ ಮೇಲೆ ಸರಣಿ ಅಪಘಾತ: ಇಬ್ಬರ ದುರ್ಮರಣ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ನಗರದ ಮಾಳಗಾಳ ಫ್ಲೈಓವರ್ ಮೇಲೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. 
ಹಿಂದಿನಿಂದ ವೇಗವಾಗಿ ಬಂದ ಇಂಡಿಕಾ ಕಾರು ಟೆಂಪೊ ಟ್ರಾವೆಲರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ, ಡಿಕ್ಕಿ ರಭಸಕ್ಕೆ ಟಿಟಿ ವಾಹನ ಫ್ಲೈಓವರ್ ಡಿವೇಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬೈಕ್ ಮೇಲೆ ಉರುಳಿ ಬಿದ್ದಿದೆ. 
ಬೈಕ್ ಮೇಲೆ ಟಿಟಿ ವಾಹನ ಉರುಳಿ ಬಿದ್ದ ಪರಿಣಾಮ, ವಾಹನದ ಕೆಳಗೆ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಗರಬಾವಿಯಿಂದ ಸುಮನಹಳ್ಳಿ ಕಡೆಗೆ ಟೆಂಪೋ ಟ್ರಾವೆಲರ್ ಹೋಗುತ್ತಿತ್ತು. ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.