ಬ್ಯಾಂಕ್ ವಿಲೀನ ಪ್ರಕರಣದಿಂದ ಹಿಂದೆ ಸರಿದ ನ್ಯಾಯಮೂರ್ತಿ
ನಷ್ಟದ ಸುಳಿಯಲ್ಲಿ ಸಿಲುಕಿದ್ದ ಅಮಾನತ್ ಬ್ಯಾಂಕ್‍ನ್ನು ಕೆನರಾ ಬ್ಯಾಂಕ್ ನೊಂದಿಗೆ ವಿಲೀನಗೊಳಿಸುವ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ನ್ಯಾ.ಅಬ್ದುಲ್ ...

ಬೆಂಗಳೂರು: ನಷ್ಟದ ಸುಳಿಯಲ್ಲಿ ಸಿಲುಕಿದ್ದ ಅಮಾನತ್ ಬ್ಯಾಂಕ್‍ನ್ನು ಕೆನರಾ ಬ್ಯಾಂಕ್ ನೊಂದಿಗೆ ವಿಲೀನಗೊಳಿಸುವ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ನ್ಯಾ.ಅಬ್ದುಲ್ ನಜೀರ್ ಹಿಂದೆ ಸರಿದಿದ್ದಾರೆ.
ಸೋಮವಾರ ಬೆಳಗ್ಗೆ ಪ್ರಕರಣ ವಿಚಾರಣೆಗೆ ಬಂದ ಸಂದರ್ಭದಲ್ಲಿ ಈ ಪ್ರಕರಣದ ವಿಚಾರಣೆಯಲ್ಲಿ ನನ್ನ ನಿಯತ್ತಿನ ಬಗ್ಗೆ ಸಂದೇಹ ವ್ಯಕ್ತಪಡಿಸಿ ನನಗೆ ಹಾಗೂ ಮುಖ್ಯ ನ್ಯಾಯಮೂರ್ತಿಗಳಿಗೆ ಕೆಲವರು ಅನಾಮಧೇಯ ಪತ್ರ ಬರೆದಿದ್ದಾರೆ. ಇದರಿಂದ ನನಗೆ ನೋವಾಗಿದೆ. ವಿಚಾರಣೆ ಸೂಕ್ತವಾಗಿ ನಡೆಯುತ್ತಿತ್ತು. ಇದೇ ರೀತಿಯಲ್ಲಿ ಮುಂದುವರೆದಿದ್ದಲ್ಲಿ ಮುಂದಿನ ದಿನಗಳಲ್ಲಿ ಬ್ಯಾಂಕ್ ಸಶಕ್ತವಾಗಿ ಬೆಳೆಯುವುದಕ್ಕೆ ಅವಕಾಶವಿತ್ತು. ಆದರೆ, ಈ ಸಂದರ್ಭದಲ್ಲಿ ಇಂತಹ ಬೆಳವಣಿಗೆ ಆಗಬಾರದಿತ್ತು ಎಂದು ಬೇಸರದಿಂದ ಹೇಳಿದ ನ್ಯಾಯಮೂರ್ತಿಗಳು ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ತಿಳಿಸಿ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾವಣೆ ಮಾಡುತ್ತಿರುವುದಾಗಿ ಹೇಳಿದರು.
ಹಿಂದೆ ಸರಿದ ಎರಡನೇ ನ್ಯಾಯಮೂರ್ತಿ: ಈ ಪ್ರಕರಣ ನಜೀರ್ ಅವರ ಪೀಠದ ಮುಂದೆ ವಿಚಾರಣೆಗೆ ಬರುವ ಮುನ್ನ ನ್ಯಾಯಮೂರ್ತಿ ರಾಮಮೋಹನ ರೆಡ್ಡಿ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಯಲ್ಲಿತ್ತು. ಆಗಲೂ ವಿಚಾರಣೆಯು ನಿರ್ಣಾಯಕ ಹಂತ ತಲುಪಿದೆ ಎನ್ನುವಾಗ ನ್ಯಾಯಮೂರ್ತಿ ಅನಾಮಧೇಯ ಪತ್ರಗಳನ್ನು ಬಂದಿದ್ದವು ಇದರಿಂದ ರಾಮಮೋಹನ ರೆಡ್ಡಿ ಅವರು ಪ್ರಕರಣದ ವಿಚಾರಣೆ ಕೈಬಿಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


