ಜಿಲ್ಲಾ ಸುದ್ದಿ

ಮೆಟ್ರೋ ಸ್ಟೇಷನ್ ನಿರ್ಮಾಣ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

ಮಲ್ಲೇಶ್ವರಂನ ಸ್ವಸ್ತಿಕ ಬಳಿಯ ಮೆಟ್ರೋ ಸ್ಟೇಷನ್ ಅನ್ನು ಮಂತ್ರಿ ಇನ್ಫ್ರಾಸ್ಟಕ್ಚರ್ ಕಂಪೆನಿಯ ಸಹಭಾಗಿತ್ವದಲ್ಲಿ ನಿರ್ಮಾಣ ಮಾಡುವುದಕ್ಕೆ...

ಮೆಟ್ರೋ ಸ್ಟೇಷನ್ ನಿರ್ಮಾಣ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ
ಮೆಟ್ರೋ ನಿಲ್ದಾಣ
Published On :

ಬೆಂಗಳೂರು : ಮಲ್ಲೇಶ್ವರಂನ ಸ್ವಸ್ತಿಕ ಬಳಿಯ ಮೆಟ್ರೋ ಸ್ಟೇಷನ್ ಅನ್ನು ಮಂತ್ರಿ ಇನ್ಫ್ರಾಸ್ಟಕ್ಚರ್  ಕಂಪೆನಿಯ ಸಹಭಾಗಿತ್ವದಲ್ಲಿ ನಿರ್ಮಾಣ ಮಾಡುವುದಕ್ಕೆ
ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ (ಬಿಎಂಆರ್‍ಸಿಎಲ್) ಮಾಡಿಕೊಂಡಿದ್ದ ಒಪ್ಪಂದವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ಹೈಕೋರ್ಟ್ ವಜಾಗೊಳಿಸಿದೆ.

ಬೆಂಗಳೂರು ನಗರದ ನಿವಾಸಿಗಳ ಸಂಘ, ಸಿಟಿಜನ್ ಆಕ್ಷನ್ ಫೋರಂ ಮತ್ತು ನಮ್ಮ ಬೆಂಗಳೂರು ಪ್ರತಿಷ್ಠಾನ ಸೇರಿದಂತೆ ವಿವಿಧ ಸಂಸ್ಥೆಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದವು. ಸರ್ಕಾರದ ಅಂಗ ಸಂಸ್ಥೆಯಾದ ಮೂಲಭೂತ ಅಭಿವೃದಿಟಛಿ ನಿಗಮ(ಐಡೆಕ್ )ನೀಡಿರುವ ವರದಿಯಂತೆ ಈ ಒಪ್ಪಂದದ ಪ್ರಕಾರ ಮಂತ್ರಿ ಮತ್ತು ಮೆಟ್ರೋ ಸಂಸ್ಥೆಗಳಿಬ್ಬರಿಗೂ ಲಾಭ ಸಿಗಲಿದೆ ಎಂದು ತಿಳಿಸಿದೆ. ಹೀಗಿರುವಾಗ ನಷ್ಟದ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಅಭಿಪ್ರಾಯ ಪಟ್ಟಿರುವ ಹಂಗಾಮಿ ಮುಖ್ಯನ್ಯಾ.ಎಸ್.ಕೆ.ಮುಖರ್ಜಿ ಮತ್ತು ನ್ಯಾ.ರವಿ ಮಳಿಮಠ್ ಅವರಿದ್ದ ನ್ಯಾಯಪೀಠ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

ಮಂತ್ರಿ ಮಾಲ್ ನಿರ್ಮಿಸಿರುವ ಜಮೀನನ್ನು ಕೆಐಎಡಿಬಿ ಸ್ವಾಧೀನ ಪಡಿಸಿಕೊಂಡಿತ್ತು. ಒಮ್ಮೆ ವಶಕ್ಕೆ ಪಡೆದಿದ್ದ ಜಮೀನನ್ನು ಮತ್ತೊಬ್ಬರಿಗೆ ನೀಡುವುದಕ್ಕೆ ಕೆಐಎಡಿಬಿ ಕಾಯಿದೆಯಲ್ಲಿ ಅವಕಾಶವಿಲ್ಲ. ಆದರೂ, ಬಿಎಂಆರ್‍ಸಿಎಲ್ ಸಂಸ್ಥೆ ಮಂತ್ರಿ ಡೆವಲಪ್ ರ್ಸ್‍ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದರಿಂದ ಅರ್ಜಿ ಸಲ್ಲಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.