ಇಂದಿನಿಂದ ನಗರದಲ್ಲಿ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಉತ್ಸವ
ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯು ಜ.6ರಿಂದ ಫೆ. 5ರವರೆಗೆ ಖಾದಿ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಮಂಡಳಿಯ ಅಧ್ಯಕ್ಷ ...

ಬೆಂಗಳೂರು: ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯು ಜ.6ರಿಂದ ಫೆ. 5ರವರೆಗೆ ಖಾದಿ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಮಂಡಳಿಯ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಸ್ವಾತಂತ್ರ್ಯಉದ್ಯಾನವನದ ಪೀಪಲ್ ಪ್ಲಾಜಾದಲ್ಲಿ ಖಾದಿ ಉತ್ಸವ ನಡೆಯಲಿದ್ದು, ಖಾದಿ ಮತ್ತು ಗ್ರಾಮೋದ್ಯೋಗ ಕ್ಷೇತ್ರದಲ್ಲಿ ದುಡಿಯುತ್ತಿರುವ ಸಾವಿರಾರು ಗ್ರಾಮೀಣ ಕೈಗಳಿಗೆ ನಿರಂತರ ಉದ್ಯೋಗ ದೊರಕಿಸಿಕೊಡಬೇಕಾದರೆ ನಿರಂತರ ಮಾರಾಟ ಅಗತ್ಯವಾಗಿರುತ್ತದೆ ಎಂದರು.
ರಾಷ್ಟ್ರದ ವಿವಿಧ ರಾಜ್ಯಗಳಿಂದ ತನ್ನದೇ ಆದ ವೈಶಿಷ್ಟ್ಯತೆಗಳ ಖಾದಿ ಮತ್ತು ಗ್ರಾಮೋದ್ಯೋಗ ಉತ್ಪನ್ನಗಳನ್ನು ಉತ್ಪಾದಕರು ಪ್ರದರ್ಶಿಸಿ ಮಾರಾಟ ಮಾಡಲಿದ್ದಾರೆ. ಇದಕ್ಕಾಗಿ ಸುಮಾರು 200ಕ್ಕೂ ಹೆಚ್ಚು ಮಳಿಗೆಗಳನ್ನು ನಿರ್ಮಿಸಲಾಗುತ್ತದೆ. ಈ ವಸ್ತು ಪ್ತದರ್ಶನಕ್ಕೆ ಸುಮಾರು 5ಲಕ್ಷಕ್ಕೂ ಮೇಲ್ಪಟ್ಟ ಖಾದಿ ಪ್ರಿಯರು ಆಗಮಿಸಲಿದ್ದಾರೆ. ಸಣ್ಣ ಕೈಗಾರಿಕೆ ಸಚಿವ ಸತೀಶ್ ಜಾರಕಿಹೊಳಿ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್, ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ವಿಧಾನ ಪರಿಷತ್ ಸದಸ್ಯ ಎಚ್.ಎಂ.ರೇವಣ್ಣ, ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅತಿಥಿಗಳಾಗಿ ಮೇಯರ್ ಬಿ.ಎನ್. ಮಂಜುನಾಥರೆಡ್ಡಿ, ಲೋಕಸಭಾ ಸದಸ್ಯ ಪಿ.ಸಿ. ಮೋಹನ್, ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಘಗಳ ಸಲಹಾ ಸಮಿತಿ ಅಧ್ಯಕ್ಷ ನಾಡೋಜ ಪಾಟೀಲ್ ಪುಟ್ಟಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


