ಜಿಲ್ಲಾ ಸುದ್ದಿ

ಮಹದಾಯಿ ವಿಚಾರದಲ್ಲಿ ಸಿಎಂ ದಾರಿ ತಪ್ಪಿಸುತ್ತಿದ್ದಾರೆ: ಜಗದೀಶ ಶೆಟ್ಟರ್

ತಾಪಂ. ಜಿಪಂ ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮಹದಾಯಿ ನದಿ ಜೋಡಣೆ ವಿಚಾರ ಪ್ರಸ್ತಾಪಿಸಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಕಿಡಿಕಾರಿದ್ದಾರೆ...

ಮಹದಾಯಿ ವಿಚಾರದಲ್ಲಿ ಸಿಎಂ ದಾರಿ ತಪ್ಪಿಸುತ್ತಿದ್ದಾರೆ: ಜಗದೀಶ ಶೆಟ್ಟರ್
ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್
Published On :

ಬೆಳಗಾವಿ: ತಾಪಂ. ಜಿಪಂ ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮಹದಾಯಿ ನದಿ ಜೋಡಣೆ ವಿಚಾರ ಪ್ರಸ್ತಾಪಿಸಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಕಿಡಿಕಾರಿದ್ದಾರೆ.

ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಮತ್ತು ಕಾಂಗ್ರೆಸ್ ಮುಖಂಡ ಜಯಾನಂದ ಮುನವಳ್ಳಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಿಎಂ ಅವರು ಕಳಸಾ, ಮಹದಾಯಿ ವಿಚಾರವಾಗಿ ಗೋವಾ ಸರ್ಕಾರಕ್ಕೆ ಪತ್ರ ಬರೆದಿದ್ದರೂ, ಉತ್ತರ ಬಂದಿಲ್ಲ ಎಂದಿದ್ದಾರೆ. ಆದರೆ, ಪ್ರಧಾನಿಮಂತ್ರಿಯವರು ಗೋವಾ, ಮಹಾರಾಷ್ಟ್ರ ರಾಜ್ಯಗಳ ಸಿಎಂ, ವಿರೋಧ ಪಕ್ಷದ ನಾಯಕರೊಂದಿಗೆ ಮಾತುಕತೆ ನಡೆಸಿ ಒಮ್ಮತದ ನಿರ್ಧಾರ ತೆಗೆದುಕೊಂಡು ಬನ್ನಿ ಎಂದು ಹೇಳಿರುವುದನ್ನು ಮುಖ್ಯಮಂತ್ರಿ ಮರೆತಿದ್ದಾರೆ.

ಈಗ ತಾಪಂ, ಜಿಪಂ ಚುನಾವಣೆ ಹಿನ್ನೆಲೆಯಲ್ಲಿ ಪತ್ರಕ್ಕೆ ಉತ್ತರ ಬಂದಿಲ್ಲ ಎಂದು ಸಿಎಂ ಬಿಜೆಪಿ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಗೋವಾ ವಿರೋಧ ಪಕ್ಷದ ನಾಯಕ ಮತ್ತು ಮಹಾರಾಷ್ಟ್ರದ ಸಿಎಂ ಮತ್ತು ವಿರೋಧ ಪಕ್ಷದ ನಾಯಕರಿಗೆ ಪತ್ರ ಯಾಕೆ ಬರೆದಿಲ್ಲ ಎಂದು ಶೆಟ್ಟರ್ ಪ್ರಶ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.