ಲಿಫ್ಟ್ ನಲ್ಲಿ ಸಿಲುಕಿದ್ದ ತಾಯಿ, ಮಗು ರಕ್ಷಣೆ
ಅಪಾರ್ಟ್‍ಮೆಂಟ್‍ವೊಂದರ ಲಿಫ್ಟ್ ನಲ್ಲಿ ಸಿಲುಕಿದ್ದ ತಾಯಿ, ಎರಡು ವರ್ಷದ ಮಗುವನ್ನು ಅಗ್ನಿ- ಶಾಮಕ ಸಿಬ್ಬಂದಿ ಒಂದು ತಾಸು ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ ಘಟನೆ ಗುರುವಾರ ನಡೆದಿದೆ...

ಬೆಂಗಳೂರು: ಅಪಾರ್ಟ್‍ಮೆಂಟ್‍ವೊಂದರ ಲಿಫ್ಟ್ ನಲ್ಲಿ ಸಿಲುಕಿದ್ದ ತಾಯಿ, ಎರಡು ವರ್ಷದ ಮಗುವನ್ನು ಅಗ್ನಿ- ಶಾಮಕ ಸಿಬ್ಬಂದಿ ಒಂದು ತಾಸು ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ ಘಟನೆ ಗುರುವಾರ ನಡೆದಿದೆ.
ಎಚ್‍ಎಸ್‍ಆರ್ ಲೈ ಔಟ್‍ನ ಮೂರನೇ ಹಂತದ ಶ್ರೀನಿವಾಸ ವೈಭವ ಅಪಾರ್ಟ್ ಮೆಂಟ್ ನಲ್ಲಿ ಬೆಳಗ್ಗೆ 8.30ರ ಸುಮಾರಿಗೆ ಘಟನೆ ನಡೆದಿದೆ.
ಅಪಾರ್ಟ್ ಮೆಂಟ್ ನ ನಾಲ್ಕನೇ ಮಹಡಿಯಲ್ಲಿ ನೆಲೆಸಿರುವ ಬಾನು (27) ಅವರು ಬೆಳಗ್ಗೆ ಮಗಲು ಐಶಾನಿಯನ್ನು ಶಾಲಾ ಬಸ್ ಹತ್ತಿಸಲು ಲಿಫ್ಟ್ ಹತ್ತಿದ್ದರು. ಆದರೆ, ಲಿಫ್ಟ್ ಮೂರು ಮತ್ತು ಎರಡನೇ ಮಹಡಿ ನಡುವೆ ಏಕಾಕಿ ನಿಂತು ಬಿಟ್ಟಿತು. ಇದರಿಂದ ಬಾನು ಸಹಾಯಕ್ಕೆ ಕೂಡಿಕೊಂಡಿದ್ದಾರೆ. ತಕ್ಷಣ ಅಪಾರ್ಟ್ ಮೆಂಟ್ ಭದ್ರತಾ ಸಿಬ್ಬಂದಿ ಅಗ್ನಿ ಶಾಮಕ ಠಾಣೆಗೆ ಕರೆ ಮಾಡಿದ್ದಾರೆ. ತಕ್ಷಣ ಸ್ಥಳಕ್ಕಾಮಿಸಿದ ಸಿಬ್ಬಂದಿ ಒಂದು ತಾಸು ಕಾರ್ಯಾಚರಣೆ ನಡೆಸಿ ತಾಯಿ ಮತ್ತು ಮಗುವನ್ನು ಸುರಕ್ಷಿತವಾಗಿ ಹೊರತಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


