ಕೆಪಿಎಸ್ ಸಿಗೆ ಅಧ್ಯಕ್ಷರನ್ನು ನೇಮಕ ಮಾಡಿ: ಎಸ್.ಟಿ.ಸೋಮಶೇಖರ್
ಕರ್ನಾಟಕ ಲೋಕಸೇವಾ ಆಯೋಗಕ್ಕೆ ಅಧ್ಯಕ್ಷರ ನೇಮಕ ವಿಚಾರದಲ್ಲಿ ವಿಳಂಬ ಮಾಡುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ...

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗಕ್ಕೆ ಅಧ್ಯಕ್ಷರ ನೇಮಕ ವಿಚಾರದಲ್ಲಿ ವಿಳಂಬ ಮಾಡುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಶಾಸಕ ಎಸ್.ಟಿ.ಸೋಮಶೇಖರ್, ಶೀಘ್ರವೇ ಆ ಸ್ಥಾನಕ್ಕೆ ಒಬ್ಬ ಪ್ರಾಮಾಣಿಕ ಮತ್ತು ಅರ್ಹ ವ್ಯಕ್ತಿಯನ್ನು ನೇಮಕ ಮಾಡುವಂತೆ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಕುರಿತು ಪತ್ರ ಬರೆದಿರುವ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೇ ಕೆಪಿಎಸ್ ಸಿ ಅಧ್ಯಕ್ಷ ಸ್ಥಾನ ಖಾಲಿ ಇದೆ. ಇದರಿಂದ ಆಯೋಗದ ದಿನ ನಿತ್ಯದ ಕಾರ್ಯಗಳಿಗೆ ಅನನುಕೂಲವಾಗುವುದಲ್ಲದೆ ರಾಜ್ಯಾದ್ಯಂತ ಸರ್ಕಾರಿ ಆಡಳಿತದ ಮೇಲೆ ಕೂಡ ಪರಿಣಾಮ ಬೀರುತ್ತಿದೆ. ಕೆಪಿಎಸ್ಸಿ ಸದಸ್ಯರ ವಿರುದ್ಧ ಭ್ರಷ್ಟಾಚಾರ ಆರೋಪಗಳು ಕೇಳಿಬರುತ್ತಿದ್ದು, ಆಯೋಗದ ನೇಮಕದಲ್ಲಿಯೂ ಅಕ್ರಮ ನಡೆದಿರುವ ಬಗ್ಗೆ ಟೀಕೆಗಳು ಕೇಳಿಬರುತ್ತಿವೆ.
ರಾಜ್ಯದ ಅನೇಕ ಮಂದಿ ಯುವಕ-ಯುವತಿಯರು ಕೆಪಿಎಸ್ ಸಿಗೆ ಅಧ್ಯಕ್ಷರನ್ನು ನೇಮಕ ಮಾಡದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.ಆದುದರಿಂದ ತಕ್ಷಣವೇ ಸರ್ಕಾರ ಆಯೋಗದ ಘನತೆ, ಗೌರವವನ್ನು ಕಾಪಾಡಲು ಪ್ರಾಮಾಣಿಕ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


