ರಸ್ತೆ ಅಪಘಾತ: ಬೈಕ್ ಸವಾರ ಸಾವು
ಬೈಕ್ ಮತ್ತು ಲಘು ಸರಕುಸಾಗಣೆ ವಾಹನದ ನಡುವೆ ಅಪಘಾತ ಸಂಭವಿಸಿ ಒಬ್ಬ ಮೃತಪಟ್ಟು, ಎರಡೂ ವಾಹನಗಳು ಸುಟ್ಟು ಹಾನಿಗೊಳಗಾಗಿರುವ ಘಟನೆ ಗುರುವಾರ ತಡರಾತ್ರಿ ಕೆ.ಆರ್.ಪುರಂ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ...

ಬೆಂಗಳೂರು: ಬೈಕ್ ಮತ್ತು ಲಘು ಸರಕುಸಾಗಣೆ ವಾಹನದ ನಡುವೆ ಅಪಘಾತ ಸಂಭವಿಸಿ ಒಬ್ಬ ಮೃತಪಟ್ಟು, ಎರಡೂ ವಾಹನಗಳು ಸುಟ್ಟು ಹಾನಿಗೊಳಗಾಗಿರುವ ಘಟನೆ ಗುರುವಾರ ತಡರಾತ್ರಿ ಕೆ.ಆರ್.ಪುರಂ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಅಸ್ಸಾಂ ಮೂಲದ ರಾಮ್ ಜಿ (21) ಮೃತಪಟ್ಟವರು. ನಫ್ರಾನ್ (22) ಅವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದಿರಾನಗರದ ತಿಪ್ಪಸಂದ್ರದಲ್ಲಿ ವಾಸವಾಗಿರುವ ರಾಮ್ ಜಿ ಉದ್ಯೋಗ ಹುಡುಕಾಟದಲ್ಲಿದ್ದರು.
ತಡರಾತ್ರಿ ಬೈಕ್‍ನಲ್ಲಿ ಹಳೇ ಮದ್ರಾಸ್ ರಸ್ತೆ ಭಟ್ಟರಹಳ್ಳಿ ಸಿಗ್ನಲ್ ಬಳಿ ಬಲತಿರುವು ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಅದೇ ಮಾರ್ಗದಲ್ಲಿ ಬರುತ್ತಿದ್ದ ಲಘು ಸರಕುಸಾಗಣೆ ವಾಹನಕ್ಕೂ ಬೈಕಿಗೂ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟುಹೋಗಿವೆ. ಘಟನೆಯಲ್ಲಿ ರಾಮïಜಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನು ಹಿಂಬದಿ ಸವಾರ ನಫ್ರಾನ್ ಗಂಭೀರವಾಗಿ ಗಾಯಗೊಂಡಿದ್ದರು. ಈ ವೇಳೆ ಸ್ಥಳಿಯರು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಕೆ.ಆರ್.ಪುರಂ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


