ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಗೆ ಅಸ್ತು ಎನ್ನದ ಸರ್ಕಾರ
ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಣ್ಯ ವಿಭಾಗದ ಅಧಿಕಾರಿಗಳಿಗೆ ವನ್ಯ ಜೀವಿಗಳ ಸ್ಥಳಾಂತರ ಸೇರಿದಂತೆ ಕೆಲವು ಸೂಕ್ಷ್ಮ ಕರ್ತವ್ಯಗಳ ಅಧಿಕಾರ ನೀಡಬೇಕೆಂಬ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ...

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಣ್ಯ ವಿಭಾಗದ ಅಧಿಕಾರಿಗಳಿಗೆ ವನ್ಯ ಜೀವಿಗಳ ಸ್ಥಳಾಂತರ ಸೇರಿದಂತೆ ಕೆಲವು ಸೂಕ್ಷ್ಮ ಕರ್ತವ್ಯಗಳ ಅಧಿಕಾರ ನೀಡಬೇಕೆಂಬ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರ5(2), 5(3) ಕಾಯ್ದೆ ಅಡಿಯಲ್ಲಿ ವನ್ಯಜೀವಿ ಸಂರಕ್ಷಣೆ, ವನ್ಯಜೀವಿ ಬೇಟೆಗಾರರ ವಿರುದಟಛಿ ಚಾರ್ಜ್‍ಶೀಟ್ ಸಲ್ಲಿಕೆ, ವನ್ಯಜೀವಿಗಳನ್ನು ಸುರಕ್ಷಿತ ಆವಾಸಸ್ಥಾನಗಳಿಗೆ ಸ್ಥಳಾಂತರ ಮಾಡುವುದು, ವನ್ಯಜೀವಿಗಳ ನಿರ್ವಹಣೆ ಮಾಡುವುದು ಸೇರಿದಂತೆ ಹಲವು ಅಧಿಕಾರಗಳನ್ನು ಮುಖ್ಯ ವನ್ಯಜೀವಿ ಪರಿಪಾಲಕರು ಹಾಗೂ ಮುಖ್ಯ
ವನ್ಯಜೀವಿ ಪರಿಪಾಲಕರ ಆಧೀನದ ಅಧಿಕಾರಿಗಳಿಗೆ ನೀಡಲಾಗಿದೆ. ಈ ಅಧಿಕಾರವನ್ನು ಪಾಲಿಕೆ ಅರಣ್ಯ ವಿಭಾಗದ ಅಧಿಕಾರಿಗಳಿಗೂ ನೀಡಬೇಕೆಂದು ಬಿಬಿಎಂಪಿ ಸಲ್ಲಿಸಿದ
ಪ್ರಸ್ತಾವನೆಯನ್ನು ಸರ್ಕಾರ ರದ್ದುಗೊಳಿಸಿದೆ.
ಬಿಬಿಎಂಪಿ ಅರಣ್ಯ ವಿಭಾಗದ ಅಧಿಕಾರಿಗಳಿಗೆ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ 5 (2), 5 (3) ಕಾಯ್ದೆ ಅಧಿಕಾರ ನೀಡುವುದು ಸಾಧ್ಯವಿಲ್ಲ. ಅಲ್ಲದೆ, ಈ ಅಧಿಕಾರ ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಅಥವಾ ಮುಖ್ಯ ವನ್ಯಜೀವಿ ಪರಿಪಾಲಕರ ಅಧೀನದಲ್ಲಿರುವ ಅಧಿಕಾರಿಗಳಿಗೆ ಮಾತ್ರ ನೀಡಲು ಸಾಧ್ಯ. ಹಾಗಾಗಿ ಬಿಬಿಎಂಪಿ ಸಲ್ಲಿಸಿದ ಪ್ರಸ್ತಾವನೆಯನ್ನು ತಿರಸ್ಕರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


