ಜಿಲ್ಲಾ ಸುದ್ದಿ

ಸರಗಳ್ಳತನಕ್ಕೆ ಪೊಲೀಸರೇ ಕುಮ್ಮಕ್ಕು!

ಸರಗಳ್ಳತನ ಮಾಡುವುದಕ್ಕೆ ಪೊಲೀಸರೇ ಮಾರ್ಗದರ್ಶನ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನೆಲಮಂಗಲ ಉಪವಿಭಾಗ ಡಿವೈಎಸ್ಪಿ ಮತ್ತು ವೃತ್ತ ನಿರೀಕ್ಷಕರನ್ನು ಖುದ್ದು ಹಾಜರಾಗಿ ಸ್ಪಷ್ಟನೆ ನೀಡಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ...

ಸರಗಳ್ಳತನಕ್ಕೆ ಪೊಲೀಸರೇ ಕುಮ್ಮಕ್ಕು!
ಹೈಕೋರ್ಟ್
Published On :

ಬೆಂಗಳೂರು: ಸರಗಳ್ಳತನ ಮಾಡುವುದಕ್ಕೆ ಪೊಲೀಸರೇ ಮಾರ್ಗದರ್ಶನ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನೆಲಮಂಗಲ ಉಪವಿಭಾಗ ಡಿವೈಎಸ್ಪಿ ಮತ್ತು ವೃತ್ತ ನಿರೀಕ್ಷಕರನ್ನು ಖುದ್ದು ಹಾಜರಾಗಿ ಸ್ಪಷ್ಟನೆ ನೀಡಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ.

ಕಳ್ಳತನ ಪ್ರಕರಣದಲ್ಲಿ ನೆಲಮಂಗಲ ಉಪವಿಭಾಗದ ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಜೈಲು ಸೇರಿರುವ ಆರೋಪಿ ಶೇಶಾ ಅಲಿಯಾಸ್ ಶೇಷಾದ್ರಿ ಎಂಬುವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಎ.ವಿ.ಚಂದ್ರಶೇಖರ್ ಅವರಿದ್ದ ನ್ಯಾಯಪೀಠ, ಅಧಿಕಾರಿಗಳು ಖುದ್ದು ಹಾಜರಾಗುವಂತೆ ಸೂಚಿಸಿದ್ದಾರೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಸ್ವತಃ ಪೊಲೀಸರೇ ಒಂಟಿ ಮಹಿಳೆಯರು ಇರುವ ಮನೆಗಳನ್ನು ಗುರುತಿಸಿ, ಸರಗಳ್ಳರಿಗೆ ಅಲ್ಲಿಗೆ ನುಗ್ಗಿ ಕಳ್ಳತನ ಮಾಡುವಂತೆ ಮಾರ್ಗದರ್ಶನ ಮಾಡಿದ್ದಾರೆ ಎಂದು ಆರೋಪಿ ಹೇಳಿಕೆ ನೀಡಿರುವುದಾಗಿ ತಿಳಿಸಿದರು.

ಇದರಿಂದಾಗಿ ತೀವ್ರ ಅಸಮಾಧಾನಗೊಂದ ನ್ಯಾಯಪೀಠ, ಪೊಲೀಸ್ ಠಾಣೆಗಳಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತವೆಯೇ ಎಂದು ಅಶ್ಚರ್ಯ ವ್ಯಕ್ತಪಡಿಸಿದ್ದಲ್ಲದೆ.
ಹೊಲವೇ ಎದ್ದು ಬೇಲಿ ಮೇಯುವಂತಾಗಿದೆ ಎಂದು ಅಭಿಪ್ರಾಯಪಟ್ಟು ಅಧಿಕಾರಿಗಳಿಗೆ ಖುದ್ದು ಹಾಜರಾಗುವಂತೆ ಸೂಚಿಸಿ ವಿಚಾರಣೆ ಮುಂದೂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.