ಲೈಂಗಿಕ ಅಲ್ಪಸಂಖ್ಯಾತರಿಗೆ ಕಿರುಕುಳ: ಕಾಯ್ದೆ ರದ್ದಿಗೆ ಅರ್ಜಿ
ಲೈಂಗಿಕ ಅಲ್ಪಸಂಖ್ಯಾತರಿಗೆ ಕಿರುಕುಳ ನೀಡುವ ಕರ್ನಾಟಕ ಪೊಲೀಸ್ ಕಾಯಿದೆ ಸೆಕ್ಷನ್ 36ಎ ಅನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ...

ಬೆಂಗಳೂರು: ಲೈಂಗಿಕ ಅಲ್ಪಸಂಖ್ಯಾತರಿಗೆ ಕಿರುಕುಳ ನೀಡುವ ಕರ್ನಾಟಕ ಪೊಲೀಸ್ ಕಾಯಿದೆ ಸೆಕ್ಷನ್ 36ಎ ಅನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಅಕ್ಕೈ ಪದ್ಮಸಾಲಿ ಸೇರಿದಂತೆ ಇತರೆ 2 ಸಂಘಟನೆಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯನ್ಯಾಯಮೂರ್ತಿ ಎಸ್.ಕೆ. ಮುಖರ್ಜಿ ಮತ್ತು ನ್ಯಾ.ರವಿ ಮಳಿಮಠ ಅವರಿದ್ದ ನ್ಯಾಯಪೀಠ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿದೆ.
ಕರ್ನಾಟಕ ಪೊಲೀಸ್ ಕಾಯಿದೆ 36ಎ ಪ್ರಕಾರ ಲೈಂಗಿಕ ಕಾರ್ಯಕರ್ತರು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಹೊಗಬೇಕಾದರೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಅನುಮತಿ ಪಡೆಯಬೇಕು. ಅವರು ನಡೆಸುವ ಲೈಂಗಿಕ ಕ್ರಿಯೆ ಪ್ರಕೃತಿಗೆ ವಿರುದ್ಧವಾಗಿದೆ. ಅಲ್ಲದೆ, ಸಣ್ಣ ಮಕ್ಕಳನ್ನು ಅಪಹರಣ ಮಾಡಿ ತಮ್ಮ ಸಮುದಾಯಕ್ಕೆ ಸೇರಿಸಿಕೊಳ್ಳುವ ಆರೋಪವಿದೆ. ರಾಜ್ಯ ಸರ್ಕಾರ ಲೈಂಗಿಕ ಅಲ್ಪಸಂಖ್ಯಾತರಾದ ತಮಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಬೆಂಬಲಿಸಿದರೆ, ಮತ್ತೊಂದು ಕಡೆ ಸಂಕಷ್ಟಕ್ಕೆ ತಳ್ಳುತ್ತಿದೆ. ಆದ್ದರಿಂದ ಕಾಯಿದೆ ರದ್ದು ಮಾಡಿ ಎಂದು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


