ಒಗ್ಗಟ್ಟಾಗಿ ಕೆಲಸ ಮಾಡಿ: ಮೇಘರಿಕ್
ಪೊಲೀಸ್ ಪೇದೆಗಳು ಮತ್ತು ಅಧಿಕಾರಿಗಳು ತಂಡವಾಗಿ ಕೆಲಸ ಮಾಡಿದಾಗ ಮಾತ್ರ ಅಪರಾಧಗಳನ್ನು ನಿಯಂತ್ರಣಕ್ಕೆ ತರಬಹುದೆಂದು ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ಅಭಿಪ್ರಾಯಪಟ್ಟರು...

ಬೆಂಗಳೂರು: ಪೊಲೀಸ್ ಪೇದೆಗಳು ಮತ್ತು ಅಧಿಕಾರಿಗಳು ತಂಡವಾಗಿ ಕೆಲಸ ಮಾಡಿದಾಗ ಮಾತ್ರ ಅಪರಾಧಗಳನ್ನು ನಿಯಂತ್ರಣಕ್ಕೆ ತರಬಹುದೆಂದು ನಗರ ಪೊಲೀಸ್ ಆಯುಕ್ತ ಎನ್.
ಎಸ್.ಮೇಘರಿಕ್ ಅಭಿಪ್ರಾಯಪಟ್ಟರು.
ಥಣಿಸಂದ್ರದ ಸಿಎಆರ್ ಉತ್ತರ ಮೈದಾನದಲ್ಲಿ ಶುಕ್ರವಾರ ನಡೆದ ಸರ್ವಿಸ್ ಪರೇಡ್‍ನಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ನಗರದಲ್ಲಿ ವಾಹನಗಳ ದಟ್ಟಣೆಗಿಂತ ಜನದಟ್ಟಣೆ ಹೆಚ್ಚಾಗಿದೆ. ಪ್ರತಿದಿನ ಲಕ್ಷಾಂತರ ಮಂದಿ ನಗರಕ್ಕೆ ಬಂದು ಹೋಗುತ್ತಾರೆ. ಹೀಗಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಜತೆಗೆ ಅಪರಾಧ ತಡೆಗಟ್ಟಲು
ನಾವೆಲ್ಲಾ ಒಗ್ಗಟ್ಟಿ ನಿಂದ ಕೆಲಸ ಮಾಡಬೇಕೆಂದು ಅವರು ಹೇಳಿದರು.
ಅಪರಾಧ ಪ್ರಕರಣಗಳಲ್ಲಿ ಆರೋಪಿಗಳನ್ನು ಸಾಧ್ಯವಾದಷ್ಟು ಬೇಗ ಬಂಧಿಸಲು ಶ್ರಮವಹಿಸಬೇಕು. ಇನ್ನು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹೆಚ್ಚು ಗಮನ ಹರಿಸುವ ಮೂಲಕ ಅಪಘಾತಗಳಿಗೆ ಕಡಿವಾಣ ಹಾಕಬೇಕು. ಪೊಲೀಸ್ ಪೇದೆಗಳಿಂದ ಹಿಡಿದು ಅಧಿಕಾರಿಗಳು ಯಾವುದೇ ಸಮಸ್ಯೆಗಳಿದ್ದರೂ ನನ್ನೊಂದಿಗೆ ಮುಕ್ತವಾಗಿ ಚರ್ಚಿಸಬಹುದು. ಇದಕ್ಕೆ ತಮ್ಮದೇನೂ ಅಭ್ಯಂತರವಿಲ್ಲ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


