ಬೈಕ್ ಸ್ಕಿಡ್ ಆಗಿ ಬಿಸಿಲೆ ಚಿತ್ರದ ನಿರ್ದೇಶಕ ಸಂದೀಪ್ ಸಾವು
ಬೆಂಗಳೂರು ವಿಶ್ವವಿದ್ಯಾಲಯ ಆವರಣದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಬಿಸಿಲೆ ಚಿತ್ರದ ನಿರ್ದೇಶಕ ಸಂದೀಪ್ (38 ವರ್ಷ) ಅವರು ನಿಧನರಾಗಿದ್ದಾರೆ...

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಆವರಣದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಬಿಸಿಲೆ ಚಿತ್ರದ ನಿರ್ದೇಶಕ ಸಂದೀಪ್ (38 ವರ್ಷ) ಅವರು ನಿಧನರಾಗಿದ್ದಾರೆ.
ಚಿತ್ರವೊಂದರ ಚಿತ್ರೀಕರಣದ ನಿಮಿತ್ತ ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿರುವ ರಸ್ತೆ ಮುಖಾಂತರವಾಗಿ ತೆರಳುತ್ತಿದ್ದ ಸಂದೀಪ್ ಅವರು ಆಯತಪ್ಪಿ ಕೆಳಗೆ ಬಿದ್ದು ದುರ್ಮರಣಕ್ಕೀಡಾಗಿದ್ದಾರೆ. ಸಂದೀಪ್ ತೆರಳುತ್ತಿದ್ದ ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದಿದ್ದು, ಸಂದೀಪ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸಬೇಕು ಎನ್ನುವಷ್ಟರಲ್ಲಿ ಅವರು ಸಾವನ್ನಪ್ಪಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ.
38 ವರ್ಷದ ಸಂದೀಪ್ ಅವರು ಬೆಂಗಳೂರಿನ ರಾಜರಾಜೇಶ್ವರಿ ನಗರದ ಬೆಮೆಲ್ ಬಡಾವಣೆಯ ನಿವಾಸಿಯಾಗಿದ್ದು, ಚಿತ್ರೀಕರಣದ ನಿಮಿತ್ತ ತಮ್ಮ ಬೈಕಿನಲ್ಲಿ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಈ ಹಿಂದೆ ನಟ ದಿಗಂತ್ ಅವರೊಂದಿಗೆ ಸಂದೀಪ್ ಅವರು ಬಿಸಿಲೆ ಎಂಬ ಚಿತ್ರವನ್ನು ನಿರ್ದೇಶಿಸಿದ್ದರು. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಸ್ತುತ ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


