ಕೆಎಸ್ ಆರ್ ಟಿಸಿಯಿಂದ ಸಂಕ್ರಾಂತಿಗೆ ಹೆಚ್ಚುವರಿ ಬಸ್:ಟಿಕೆಟ್ ಬುಕ್ಕಿಂಗ್ ಗೆ ಶೇ.5 ರಷ್ಟು ರಿಯಾಯಿತಿ
ಸಂಕ್ರಾಂತಿ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಿದೆ. ಜ.14, 15ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷ ಬಸ್ ...

ಬೆಂಗಳೂರು: ಸಂಕ್ರಾಂತಿ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಿದೆ. ಜ.14, 15ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷ ಬಸ್ ಹಾಗೂ ಜ. 17ರಂದು ಹೊರ ರಾಜ್ಯಗಳಿಂದ ಬೆಂಗಳೂರಿಗೆ ಬರುವವರಿಗಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.
ಹೆಚ್ಚುವರಿಯಾಗಿ ಒಟ್ಟು 500 ಬಸ್‌ಗಳ ವ್ಯವಸ್ಥೆ ಮಾಡಿದ್ದು, ಮೆಜೆಸ್ಟಿಕ್‌ನಿಂದ ತಿರುಪತಿ, ಬೀದರ್, ಯಾದಗಿರಿ, ಕಲಬುರ್ಗಿ, ಬಳ್ಳಾರಿ, ರಾಯಚೂರು, ಕಾರವಾರ, ಶಿರಸಿ, ಗೋಕರ್ಣ, ವಿಜಯಪುರ ಹಾಗೂ ಇನ್ನಿತರ ಸ್ಥಳಗಳಿಗೆ ಬಸ್‌ಗಳು ಹೊರಡಲಿವೆ.
ಹುಬ್ಬಳ್ಳಿ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ ಹಾಗೂ ಕಾರವಾರದತ್ತ ಸಂಚರಿಸುವ ಮುಂಗಡ ಟಿಕೆಟ್ ಕಾಯ್ದಿರಿಸಿದ ವಿಶೇಷ ಬಸ್‌ಗಳು ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಹೊರಡಲಿವೆ. ಮುಂಗಡ ಕಾಯ್ದಿರಿಸದ ಬಸ್‌ಗಳು ಮೆಜೆಸ್ಟಿಕ್ ಬಸ್ ನಿಲ್ದಾಣದಿಂದಲೇ ಹೊರಡಲಿವೆ.
ಕಲಬುರ್ಗಿ, ಬಳ್ಳಾರಿ, ರಾಯಚೂರು, ಹೊಸಪೇಟೆ, ಕೊಪ್ಪಳ ಯಾದಗಿರಿ ಬೀದರ್ ಕಡೆಗೆ ಹೋಗುವ ಮುಂಗಡ ಟಿಕೆಟ್ ಕಾಯ್ದಿರಿಸಿದ ಬಸ್‌ಗಳು ಪೀಣ್ಯ ನಿಲ್ದಾಣದಿಂದ ಹೊರಡಲಿವೆ. ಕಾಯ್ದಿರಿಸದ ಬಸ್‌ಗಳು ಕೆಂಪೇಗೌಡ ಬಸ್ ನಿಲ್ದಾಣದಿಂದಲೇ ಹೊರಡಲಿವೆ.
ಇನ್ನು ಪ್ರತಿಬಾರಿಯಂತೆ ಈ ಬಾರಿಯೂ ನಾಲ್ಕು ಮಂದಿಗಿಂತ ಹೆಚ್ಚು ಮಂದಿ ಜೊತೆಯಲ್ಲೇ ಟಿಕೆಟ್ ಬುಕ್ ಮಾಡಿಕೊಂಡಲ್ಲಿ ಟಿಕೆಟ್ ದರದಲ್ಲಿ 5% ವಿನಾಯಿತಿ ದೊರೆಯಲಿದೆ. ಇನ್ನು ವಾಪಸಾತಿ ಟಿಕೆಟ್‌ನ್ನು ಕೂಡಾ ಜೊತೆಯಲ್ಲೇ ಬುಕ್ ಮಾಡಿದ್ರೆ 10% ರಿಯಾಯಿತಿ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


