ತಡೆಯಾಜ್ಞೆ ತೆರವಿಗೆ ಲೋಕಾ ಪೊಲೀಸರೊಂದಿಗೆ ಚರ್ಚಿಸಿ
ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ತಡೆಯಾಜ್ಞೆ ತೆರವುಗೊಳಿಸಲು ಅನುಸರಿಸಬೇಕಾದ ಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸುವಂತೆ ಹೈಕೋರ್ಟ್ ಹೆಚ್ಚುವರಿ ಅಡ್ವೋಕೇಟ್ ಜನರಲ್ ಎ.ಎಸ್. ಪೊನ್ನಣ್ಣ ನವರಿಗೆ ಹೈಕೋರ್ಟ್ ಸೂಚನೆ ನೀಡಿದೆ...

ಬೆಂಗಳೂರು: ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ತಡೆಯಾಜ್ಞೆ ತೆರವುಗೊಳಿಸಲು ಅನುಸರಿಸಬೇಕಾದ ಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸುವಂತೆ ಹೈಕೋರ್ಟ್ ಹೆಚ್ಚುವರಿ ಅಡ್ವೋಕೇಟ್ ಜನರಲ್ ಎ.ಎಸ್. ಪೊನ್ನಣ್ಣ ನವರಿಗೆ ಹೈಕೋರ್ಟ್ ಸೂಚನೆ ನೀಡಿದೆ.
ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗುವ ಪ್ರಕರಣಗಳಲ್ಲಿನ ಒಂದು ವರ್ಷ ಕಳೆದರೂ ವಿಚಾರಣೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ನ್ಯಾ.ಎ.ಎನ್. ವೇಣುಗೋಪಾಲ್‍ಗೌಡ ಅವರಿದ್ದ ನ್ಯಾಯಪೀಠ, ಈ ಸಂಬಂಧ ಜನವರಿ 18 ರಿಂದ 23ರೊಳಗೆ ಲೋಕಾಯುಕ್ತ ಪೊಲೀಸ್ ವಿಭಾಗದ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸುವಂತೆ ಸೂಚಿಸಿದೆ. ಪ್ರಕರಣದ ವಿಚಾರಣೆ ವೇಳೆ ಹಾಜರಿದ್ದ ಪೊನ್ನಣ್ಣ, ಭ್ರಷ್ಟಾಚಾರ ಆರೋಪಗಳ ಸಂಬಂಧ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ 21 ಪ್ರಕರಣಗಳಿಗೆ ಹೈಕೊರ್ಟ್ ತಡೆ ನೀಡಿದೆ.
ಲೋಕಾಯುಕ್ತ ಪೊಲೀಸ್ ವಿಭಾಗದಲ್ಲಿ 105 ಹುದ್ದೆಗಳು ಖಾಲಿಯಿವೆ. ಅದರಲ್ಲಿ 5 ಪೊಲೀಸ್ ಅಧೀಕ್ಷಕರು, 24 ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಹುದ್ದೆಗಳು ಖಾಲಿಯಿವೆ ಎಂದು ವಿವರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, 21 ಪ್ರಕರಣಗಳಲ್ಲಿ ಹೈಕೋರ್ಟ್ ನೀಡಿರುವ ತಡೆಯಾಜ್ಞೆ ತೆರವುಗೊಳಿಸಲು, ಆ ಪ್ರಕರಣಗಳು ತ್ವರಿತವಾಗಿ ಇತ್ಯರ್ಥಪಡಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆ ನಡೆಸಿ ತೀರ್ಮಾನಿಸಬೇಕು. ಮುಂದಿನ ವಿಚಾರಣೆ ವೇಳೆ ಸಭೆಯಲ್ಲಿ ಕೈಗೊಂಡ ತೀರ್ಮಾನದ ಬಗ್ಗೆ ಮಾಹಿತಿ ನೀಡಬೇಕು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


