ಮದ್ಯದ ಅಮಲಿನಲ್ಲಿ ಕೊಲೆ
ಮದ್ಯದ ಅಮಲಿನಲ್ಲಿದ್ದ ಸ್ನೇಹಿತರ ನಡುವೆ ನಡೆದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ...

ಬೆಂಗಳೂರು: ಮದ್ಯದ ಅಮಲಿನಲ್ಲಿದ್ದ ಸ್ನೇಹಿತರ ನಡುವೆ ನಡೆದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ.
ಪುಲಕೇಶಿನಗರದ ಡಿಕೋಸ್ಟಾ ಲೇಔಟ್ ನಲ್ಲಿರುವ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಘಟನೆ ನಡೆದಿದ್ದು, ವಸಂತನಗರ ನಿವಾಸಿ ಗೌತಮ್ (21) ಹತ್ಯೆಗೀಡಾದ ಯುವಕ.
ಪಿಯುಸಿ ಮುಗಿಸಿ ಉದ್ಯೋಗ ಹುಡುಕುತ್ತಿದ್ದ ಗೌತಮ್ ಹಾಗೂ ಸ್ನೇಹಿತ ಅಜಿತ್ ಸೇರಿ ಐದಾರು ಸ್ನೇಹಿತರು ತಡ ರಾತ್ರಿ 1 ಗಂಟೆವರೆಗೆ ಡಿಕೋಸ್ಟಾ ಲೇಔಟ್ ನಲ್ಲಿರುವ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಪಾರ್ಟಿ ಮಾಡಿದ್ದಾರೆ.
ಕಂಠಪೂರ್ತಿ ಕುಡಿದು ಇಸ್ಪೀಟ್ ಆಡಿದ್ದಾರೆ. ಮದ್ಯದ ಅಮಲಿನಲ್ಲಿದ್ದ ಗೌತಮ್ ಎದುರುಗಡೆ ಕುಳಿತಿದ್ದ ಇಬ್ಬರ ಮುಖಕ್ಕೆ ಸಿಗರೇಟ್ ಹೊಗೆಯನ್ನು ಬಿಟ್ಟಿದ್ದಾನೆ. ಈ ವೇಳೆ ಮಾತಿನ ಚಕಮಕಿ ನಡೆದಿದೆ.
ಕೋಪಗೊಂಡ ಇಬ್ಬರು ಯುವಕರು ಗೌತಮ್ ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಆತನನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಬೆಳಗ್ಗೆ ಕೂಲಿ ಕಾರ್ಮಿಕರು ಕಟ್ಟಡದ ಕೆಲಸಕ್ಕೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.
ಗೌತಮ್ ಗೆ ಅಜಿತ್ ಹೊರತು ಪಡಿಸಿ ಇತರೆ ಯಾರೂ ಗೊತ್ತಿರಲಿಲ್ಲ. ಅವರೇ ಈತನನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಆರೋಪಿಗಳ ಪತ್ತೆ ಕಾರ್ಯ ನಡೆದಿದ್ದು, ಅನುಮಾನದ ಮೇಲೆ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪುಲಕೇಶಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


