ವಿವೇಕಾನಂದರ ತತ್ವಾದರ್ಶ ಅಳವಡಿಸಿಕೊಳ್ಳಿ
ಯುವ ಜನತೆ ವಿವೇಕಾನಂದರ ತತ್ವಾದರ್ಶಗಳನ್ನು ಅನುರಿಸುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳ ಬೇಕು ಎಂದು ಹೈಕೋರ್ಟ್ ನ ಹಂಗಾಮಿ ಮುಖ್ಯನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹೇಳಿದ್ದಾರೆ...

ಬೆಂಗಳೂರು: ಯುವ ಜನತೆ ವಿವೇಕಾನಂದರ ತತ್ವಾದರ್ಶಗಳನ್ನು ಅನುರಿಸುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳ ಬೇಕು ಎಂದು ಹೈಕೋರ್ಟ್ ನ ಹಂಗಾಮಿ ಮುಖ್ಯನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹೇಳಿದ್ದಾರೆ.
ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಂಸ್ಥೆಯಿಂದ ಅರಮನೆ ರಸ್ತೆಯ ಶಾಂತಿಗೃಹದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಾಂತಿ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.
ವಿವೇಕಾನಂದರು ತಮ್ಮ 39 ವರ್ಷಗಳ ಜೀವನದಲ್ಲಿ ನೂರಾರು ಭಾಷಣಗಳನ್ನು ಮಾಡಿದ್ದಾರೆ. ಅವರು ಮಾಡಿರುವ ಎಲ್ಲ ಭಾಷಣಗಳಲ್ಲಿ ನಮ್ಮ ದೇಶದ ಸಂಸ್ಕೃತಿಯನ್ನು ಇತರರಿಗೆ ವಿವರಿಸಿದ್ದಾರೆ. ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ನಲ್ಲಿ ಭಾಗವಹಿಸುವ ಎಲ್ಲ ವಿದ್ಯಾರ್ಥಿಗಳು ವಿವೇಕಾನಂದರನ್ನು ಆದರ್ಶ ವ್ಯಕ್ತಿಯನ್ನಾಗಿ ಸ್ವೀಕರಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯ, ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್‍ನ ಕಾರ್ಯದರ್ಶಿ ಸಿದ್ದಯ್ಯ, ಷಣ್ಮುಖಪ್ಪ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


