ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಸಾವು
ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಕೊನೆಯುಸಿರೆಳೆದರು...

ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಕೊನೆಯುಸಿರೆಳೆದರು.
ಹೊಸಪಾಳ್ಯ ಮುಖ್ಯರಸ್ತೆ ನಿವಾಸಿ ಮಹಾಲಕ್ಷ್ಮಿ(25) ಮೃತಪಟ್ಟ ದುರ್ದೈವಿ. ಕನ್ಸಲ್‍ಟೆನ್ಸಿ ನಡೆಸುತ್ತಿದ್ದ ಇವರು ಭಾನುವಾರ ರಾತ್ರಿ ಕೆಲಸ ಮುಗಿಸಿ ತಮ್ಮ ದ್ವಿಚಕ್ರ ವಾಹನದಲ್ಲಿ ಮನೆಗೆ ವಾಪಸಾಗುವಾಗ ಎಚ್‍ಎಸ್‍ಆರ್ ಲೇಔಟ್ 1ನೇ ಸೆಕ್ಟರ್‍ನಲ್ಲಿ ಹಿಂದಿನಿಂದ ವೇಗವಾಗಿ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣ ಸ್ಥಳಿಯರ ನೆರವಿನಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಘಟನೆ ವೇಳೆ ತೀವ್ರ ರಕ್ತಸ್ರಾವದಿಂದ ನಿತ್ರಾಣರಾಗಿದ್ದ ಮಹಾಲಕ್ಷ್ಮೀ ಚಿಕಿತ್ಸೆ ಫಲಕಾರಿಯಾಗ ದೆ ಮಂಗಳವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಸ್ವಾಮಿ ವಿವೇಕಾನಂದರ ಜಯಂತಿ ಪ್ರಯುಕ್ತ ಮಂಗಳವಾರ ರಾಜಾಜಿನಗರದ ಶಾಲಾ ಮಕ್ಕಳು ವಿವೇಕಾನಂದ ಸಂದೇಶ ಫಲಕಗಳೊಂದಿಗೆ ಘೋಷಣೆ ಕೂಗುತ್ತಾ ಜಾಥಾ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


