ನನ್ನ ಮಗ ನಿರಪರಾಧಿ, ಮುಗ್ಧ :ಮೌಲಾನಾ ಖಾಸ್ಮಿ ತಂದೆ
ನನ್ನ ಮಗ ನಿರಪರಾಧಿ, ಆತ ಮುಗ್ಧ ಎಂದು ಆಲ್-ಖೈದಾ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ...

ಬೆಂಗಳೂರು: ನನ್ನ ಮಗ ನಿರಪರಾಧಿ, ಆತ ಮುಗ್ಧ ಎಂದು ಆಲ್-ಖೈದಾ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ ಬಂಧಿತನಾಗಿರುವ ಬೆಂಗಳೂರು ಮೂಲದ ಪಾದ್ರಿ ಮೌಲ್ವಿ ಮೌಲಾನಾ ಸೈಯದ್ ಅನ್ಸರ್ ಶಾ ಖಾಸ್ಮಿ ತಂದೆ ಹೇಳಿಕೆ ನೀಡಿದ್ದಾರೆ. ಇನ್ನೊಂದೆಡೆ ರಾಜ್ಯ ಸರ್ಕಾರ ಮೌಲಾನಾನನ್ನು ತನಿಖೆ ನಡೆಸುತ್ತಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ದೆಹಲಿ ಪೊಲೀಸರು ಮೌಲಾನಾನನ್ನು ಆಲ್ -ಖೈದಾ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಪ್ರಗತಿ ಬಗ್ಗೆ ನಾನು ಅಭಿಪ್ರಾಯವನ್ನು ತಿಳಿಸುವುದಿಲ್ಲ. ಮೌಲಾನಾ ತನಿಖೆಗೆ ಸಹಕಾರ ನೀಡುವಂತೆ ಸಿದ್ದರಾಮಯ್ಯ ಸರ್ಕಾರದ ಮೇಲೆ ಒತ್ತಡ ಕೇಳಿಬರುತ್ತಿದೆ.
''ನನ್ನ ಮಗ ಒಬ್ಬ ಮುಸಲ್ಮಾನ ವಿದ್ವಾಂಸ ಮತ್ತು ಪಾದ್ರಿಯಷ್ಟೆ. ನನ್ನ ಮಗ ದೇಶ ವಿರೋಧಿ ಭಾಷಣದಲ್ಲಿ ಅಥವಾ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾನೆಯೇ ಎಂದು ಮಾಧ್ಯಮಗಳು ಎಲ್ಲಾ ಮೂಲಗಳಿಂದಲೂ ತನಿಖೆ ನಡೆಸಬೇಕು. ಎಲ್ಲಾ ದೃಷ್ಟಿಕೋನದಿಂದ ನೋಡಬೇಕು. ಅವನು ಯಾವುದೇ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿಲ್ಲ. ನನ್ನ ಮಗನ ವಿರುದ್ಧ ಪಿತೂರಿ ನಡೆಸಲಾಗಿದೆ ಎಂದು ಮೌಲಾನಾ ತಂದೆ ಮೋಮಿನ್ ಶಾ ಖಾಸ್ಮಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


