ಅಲ್ಲಿ ಒಬ್ಬಳಿಗೆ ರೈಲು ಓಡಿದ್ರೆ, ಇಲ್ಲಿ 340 ಮಕ್ಕಳಿದ್ದರೂ ಬಸ್ಸಿಲ್ಲ
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಕೊನೆಗೂ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿಯೇಗಟ್ಟಿ. ವಿರೋಧದ ನಡುವೆಯೂ...

Published On :
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಕೊನೆಗೂ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿಯೇಗಟ್ಟಿ. ವಿರೋಧದ ನಡುವೆಯೂ ಪರಮೇಶ್ವರ್‍ಗೆ ಚಿಕ್ಕಮಗಳೂರು ಉಸ್ತುವಾರಿಯನ್ನು ನೀಡಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಬಯಸಿದ್ದ ಪರಮೇಶ್ವರ್‍ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕಮಗಳೂರು ಉಸ್ತುವಾರಿ ವಹಿಸಿಕೊಳ್ಳಲು ಸೂಚಿಸಿದ್ದರು. ಈ ಬಗ್ಗೆ ಮಾಧ್ಯಮಗಳು ಪ್ರತಿಕ್ರಿಯೆ ಕೇಳಿದಾಗ ಪರಮೇ-ಶ್ವರ್ ಅಗತ್ಯ ಮತ್ತು ಅನಿವಾರ್ಯವಾದರೆ ಮಾತ್ರ ಚಿಕ್ಕಮಗಳೂರು ಉಸ್ತುವಾರಿ ವಹಿಸಿಕೊಳ್ಳುತ್ತೇನೆ ಎಂದು ಹೇಳಿದ್ದರು. ಆದರೂ ಇದನ್ನು ಸಮರ್ಥಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಅಭಯಚಂದ್ರ ಜೈನ್‍ಗೆ ಉಸ್ತುವಾರಿ ಬೇಡವಾಗಿದೆ ಆದ್ದರಿಂದ ಪರಮೇಶ್ವರ್‍ಗೆ ಕೊಡುತ್ತಿದ್ದೇವೆ ಎಂದು ಹೇಳಿದ್ದರು.
ಈಗ ಅದೇ ಅಂತಿಮವಾಗಿದ್ದು ಗುರುವಾರ ಯೋಜನಾ ಇಲಾಖೆ ಅಧಿೀನ ಕಾರ್ಯದರ್ಶಿ ಉಸ್ತುವಾರಿ ಸಚಿವರ ನೇಮಕ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಅಭಿವೃದ್ಧಿ ಮತ್ತು 20 ಅಂಶಗಳ ಕಾರ್ಯಕ್ರಮಗಳನ್ನು ಜಿಲ್ಲಾ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಈ ನೇಮಕ ಮಾಡಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


