ಗಣತಂತ್ರಕ್ಕೆ ನಗರದಲ್ಲಿ ತೀವ್ರ ಕಟ್ಟೆಚ್ಚರ
ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ನಗರದ ಆಯಕಟ್ಟಿನ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಎಸ್. ಮೇಘರಿಕ್ ತಿಳಿಸಿದ್ದಾರೆ...

ಬೆಂಗಳೂರು: ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ನಗರದ ಆಯಕಟ್ಟಿನ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಎಸ್. ಮೇಘರಿಕ್ ತಿಳಿಸಿದ್ದಾರೆ.
ಕಾವೈರಿ ಜಂಕ್ಷನ್ ನಲ್ಲಿ ಅನುಮಾನಾಸ್ಪದ ವಸ್ತುಪತ್ತೆ ಹಿನ್ನೆಲೆಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪತ್ತೆಯಾದ ಅನುಮಾನಾಸ್ಪದ ವಸ್ತು ಯಾವುದೇ ಸ್ಫೋಟಕ ಅಲ್ಲ, ಕಿಡಿಗೇಡಿಗಳು ಪ್ಲಾಸ್ಠಿಕ್ ಬಾಕ್ಸ್ ವೊಂದರಲ್ಲಿ ವಿದೇಶಿ ಮದ್ಯದ ಬಾಟಲಿ ಇಟ್ಟು ಸೆಣಬುದಾರದಿಂದ ಬಾಕ್ಸ್ ಕಟ್ಟಿದ್ದಹರಿಂದ ಅನುಮಾನಕ್ಕೆ ಕಾರಣವಾಗಿತ್ತು. ಇದೀಗ ಆ ಅನುಮಾನ ಬಗೆಹರಿದಿದೆ. ಹೀಗಾಗಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ನಗರದ ಆಯಕಟ್ಟಿನ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಹೇಳಿದರು.
ನೂತನ ಕಟ್ಟಡಕ್ಕೆ ಆಯುಕ್ತರ ಕಚೇರಿ:
ಬಹಳ ದಿನಗಳ ನಿರೀಕ್ಷೆಯಂತೆ ನಗರ ಪೊಲೀಸ್ ಆಯುಕ್ತರ ಕಚೇರಿ ನೂತನ ಕಟ್ಟಡಕ್ಕೆ ಸ್ಥಳಾಂತರವಾಯಿತು. ಸಂಕ್ರಾಂತಿ ಹಬ್ಬದ ದಿನವೇ ಕಚೇರಿ ಸ್ಥಳಾಂತರವಾಗಿದ್ದು ವಿಶೇಷ. ವಿವಿಧ ಹೂಗಳಿಂದ ಶೃಂಗಾರಗೊಂಡಿದ್ದ ಕಟ್ಟಡಕ್ಕೆ ಬೆಳಗ್ಗಿನಿಂದಲೇ ಪೀಠೋಪಕರಣಗಳು ದಾಖಲೆಗಳನ್ನು ಸ್ಥಳಾಂತರಿಸಲಾಯಿತು. ಸಣ್ಣ ಪೂಜೆಯೂ ನೆರವೇರಿತು.
ಆರು ತಿಂಗಳ ಹಿಂದೆಯೇ ಕಟ್ಟಡಕ್ಕೆ ಸ್ಥಳಾಂತರವಾಗುವ ಯೋಚನೆ ಇತ್ತು. ಆದರೆ, ಕಟ್ಟಡದ ಕೆಲಸ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ತಡವಾಯಿತು. ವಾಸ್ತು ಬಗ್ಗೆ ನನಗೆ ನಂಬಿಕೆ ಇಲ್ಲ. ಹಾಗಂತ ಇನ್ನೊಬ್ಬರ ನಂಬಿಕೆಗೆ ಅಡ್ಡಿಪಡಿಸುವುದಿಲ್ಲ ಎಂದು ಆಯುಕ್ತರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


