ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ
ಮಲ್ಲಸಂದ್ರ ಬಳಿಯ ಬಾಬಣ್ಣ ಲೇಔಟ್‍ನಲ್ಲಿರುವ ವೆನ್ಸಾಯಿ ಅಪಾರ್ಟ್‍ಮೆಂಟ್‍ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ...

Published On :
ಬೆಂಗಳೂರು: ಮಲ್ಲಸಂದ್ರ ಬಳಿಯ ಬಾಬಣ್ಣ ಲೇಔಟ್‍ನಲ್ಲಿರುವ ವೆನ್ಸಾಯಿ ಅಪಾರ್ಟ್‍ಮೆಂಟ್‍ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ.
ವಿಶ್ವಮೂರ್ತಿ (36) ಮತ್ತು ನರೇಂದ್ರಬಾಬು (27) ಬಂಧಿತ ಆರೋಪಿಗಳು. ಬೆಂಗಳೂರು ಮೂಲದ ಇಬ್ಬರು ಮಹಿಳೆಯರು ಹಾಗೂ ಕೋಲ್ಕತ್ತಾ ಮೂಲದ ಓರ್ವ ಮಹಿಳೆಯನ್ನು ರಕ್ಷಿಸಿ, ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ. ಬಂಧಿತ ಆರೋಪಿಗಳು ಅಪಾರ್ಟ್ ಮೆಂಟ್ ಖರೀದಿಸಿ ಅದನ್ನು ವೇಶ್ಯಾವಾಟಿಕೆ ನಡೆಸಲು ಬಳಸುತ್ತಿದ್ದರು.
ಈ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೀಣ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆರೋಪಿಗಳಿಂದ 4.200 ರೂಪಾಯಿ ನಗದು ಹಾಗೂ 7 ಕಾಂಡೋಂಮ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


