ಜಿಲ್ಲಾ ಸುದ್ದಿ

ಮೋರಿಗೆ ಬಿದ್ದು ಸವಾರ ಸಾವು

ಅತಿ ವೇಗದಲ್ಲಿ ಬೈಕ್ ಚಾಲನೆ ಮಾಡಿ ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ...

ಮೋರಿಗೆ ಬಿದ್ದು ಸವಾರ ಸಾವು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಅತಿ ವೇಗದಲ್ಲಿ ಬೈಕ್ ಚಾಲನೆ ಮಾಡಿ ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೆಂಗೇರಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.

ಅವಲಹಳ್ಳಿ ನಿವಾಸಿ ಅತೀಸ್ ಸಾಗರ್ ಬಿನ್ನಿ(21) ಮೃತಪಟ್ಟವರು. ತಗಸಕುಪ್ಪೆ ನಿವಾಸಿ ದೀಪಕ್ ಪಟೇಲ್ (21) ಗಾಯಗೊಂಡವರು. ಡಿಪ್ಲೊಮೋ ವ್ಯಾಸಂಗ ಮಾಡಿರುವ ಇಬ್ಬರೂ ಸ್ನೇಹಿತರಾಗಿದ್ದು ಇವೆಂಟ್ ಮ್ಯಾನೇಜ್ ಮೆಂಟ್ ಕಂಪನಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಕೆಲಸ ನಿಮಿತ್ತ ಬೆಳಗ್ಗೆ 7 ಗಂಟೆ ಸುಮಾರಿಗೆ ಕೆಟಿಎಂ ಬೈಕ್‍ನಲ್ಲಿ ಮೈಸೂರು ರಸ್ತೆ ಮೂಲಕ ನಗರಕ್ಕೆ ಬರುವಾಗ ಕೆಂಗೇರಿ ಟಾಟಾ ಮೋಟಾರ್ಸ್ ಎದುರು ನಿಯಂತ್ರಣ ತಪ್ಪಿ ಬೈಕ್ ಮೋರಿಗೆ ಬಿದ್ದಿದೆ.

ಇದರಿಂದ ಚಾಲಕ ಅತೀಸ್ ಸಾಗರ್ ಬಿನ್ನಿ ಸ್ಥಳದಲ್ಲೇ ಮೃತಪಟ್ಟರು. ಹಿಂಬದಿ ಸವಾರ ದೀಪಕ್ ಪಟೇಲ್ ಬೆನ್ನು ಮೂಳೆಗೆ ಹಾನಿಯಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.