ಜಿಲ್ಲಾ ಸುದ್ದಿ

ಬಿಎಂಟಿಸಿ ಬಸ್‍ಗೆ ಬೆಂಕಿ

ಎಂಜಿನ್‍ನಲ್ಲಿ ಉಂಟಾದ ಶಾರ್ಟ್ ಸಕ್ರ್ಯೂಟ್‍ನಿಂದ ಬಿಎಂಟಿಸಿ ಬಸ್‍ಗೆ ಬೆಂಕಿ ತಗುಲಿದ ಘಟನೆ ಮಂಗಳವಾರ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದ್ದು, ಅದೃಷ್ಟವಶಾತ್ ಯಾರಿಗೂ ಯಾವುದೇ ಹಾನಿಯಾಗಿಲ್ಲ...

ಬಿಎಂಟಿಸಿ ಬಸ್‍ಗೆ ಬೆಂಕಿ
(ಸಾಂದರ್ಭಿಕ ಚಿತ್ರ)
Published On :

ಬೆಂಗಳೂರು: ಎಂಜಿನ್‍ನಲ್ಲಿ ಉಂಟಾದ ಶಾರ್ಟ್ ಸಕ್ರ್ಯೂಟ್‍ನಿಂದ ಬಿಎಂಟಿಸಿ ಬಸ್‍ಗೆ ಬೆಂಕಿ ತಗುಲಿದ ಘಟನೆ ಮಂಗಳವಾರ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದ್ದು, ಅದೃಷ್ಟವಶಾತ್ ಯಾರಿಗೂ ಯಾವುದೇ ಹಾನಿಯಾಗಿಲ್ಲ.

ಬಿಎಂಟಿಸಿ ಬಸ್ ನಿಲ್ದಾಣದ ಪ್ಲಾಟ್ ಫಾರಂ 25ರಲ್ಲಿ ನಿಂತಿದ್ದ ಚಂದ್ರಲೇಔಟ್ ಮಾರ್ಗದ ಬಸ್‍ನ ಎಂಜಿನ್‍ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಇದರಿಂದ ಜಾಗೃತರಾದ ಬಸ್ ಚಾಲಕ ಹಾಗೂ ನಿರ್ವಾಹಕ ಪ್ರಯಾಣಿಕರನ್ನು ಬಸ್‍ನಿಂದ ಇಳಿಸಿ, ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ಕೂಡಲೇ ಬಿಎಂಟಿಸಿ ಅಧಿಕಾರಿಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಆಗಿಲ್ಲ. ಇದೇ
ವೇಳೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.