ಎಲ್ಲಾ ದಾಖಲೆಗಳ ಸಂಗ್ರಹ, ಸಿಜೆ ಅವರಿಗೆ ಸದ್ಯದಲ್ಲೆ ಸಲ್ಲಿಕೆ
ಉಪ ಲೋಕಾಯುಕ್ತ ಸುಭಾಷ್ ಬಿ.ಅಡಿ ಅವರ ಪದಚ್ಯುತಿ ಪ್ರಸ್ತಾವನೆಯನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಕಳುಹಿಸಿಕೊಡಲು ವಿಳಂಬವಾಗಿದ್ದು, ಇನ್ನೊಂದು...

ಬೆಂಗಳೂರು: ಉಪ ಲೋಕಾಯುಕ್ತ ಸುಭಾಷ್ ಬಿ.ಅಡಿ ಅವರ ಪದಚ್ಯುತಿ ಪ್ರಸ್ತಾವನೆಯನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಕಳುಹಿಸಿಕೊಡಲು ವಿಳಂಬವಾಗಿದ್ದು, ಇನ್ನೊಂದು ವಾರದಲ್ಲಿ ಈ ಕುರಿತ ಪ್ರಸ್ತಾವನೆ ಕಳುಹಿಸಿಕೊಡುವೆ' ಎಂದು ವಿಧಾನಸಭೆ ಅಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಲೋಕಾಯುಕ್ತ ನ್ಯಾ. ಸುಭಾಷ್ ಅಡಿ ಅವರ ವಿರುದ್ಧ ಮಂಡಿಸಿರುವ ಹಕ್ಕುಚ್ಯುತಿ ಪ್ರಸ್ತಾವನೆಗೆ ಸಂಬಂಧಿಸಿದಂತೆ ಪೂರಕ ದಾಖಲೆಗಳು ಲಭ್ಯವಾದ ಹಿನ್ನೆಲೆಯಲ್ಲಿ ಅದನ್ನು ಅಂಗೀಕರಿಸಿದ್ದೇನೆ. ಆದರೆ, ಅನಾರೋಗ್ಯದ ಕಾರಣದಿಂದಾಗಿ ಅದನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಕಳುಹಿಸಲು ವಿಳಂಬವಾಯಿತು ಎಂದರು.
ಈ ವಿಚಾರದಲ್ಲಿ ತಮ್ಮ ವಿರುದ್ಧ ಕೆಲವರು ಪ್ರತಿಕ್ರಿಯಿಸಿರುವ ಬಗ್ಗೆ ಕಿಡಿ ಕಾರಿದ ತಿಮ್ಮಪ್ಪ, 'ಇಂತಹ ಗಂಭೀರ ವಿಚಾರಗಳಲ್ಲಿ ಹುಡುಗಾಟಿಕೆ ಮಾಡಲು ನಾನೇನೂ ಹುಡುಗನಲ್ಲ. ಯಾರದ್ದೊ ಒತ್ತಡಕ್ಕೆ ಮಣಿಯುತ್ತೇನೆ ಎನ್ನಲು ನಾನು ಯಾರ ಮಾತನ್ನೂ ಕೇಳುವವನಲ್ಲ. ನ್ಯಾ. ಅಡಿ ವಿರುದ್ಧದ ಆರೋಪಗಳು ಮೇಲ್ನೋಟಕ್ಕೆ ಸರಿ ಇವೆ ಎಂಬುದು ನನಗೆ ಅನಿಸಿದರೆ ಮುಖ್ಯ ನ್ಯಾಯಮೂರ್ತಿಗಳಿಗೆ ಕಳುಹಿಸಿಕೊಡುತ್ತೇನೆ' ಎಂದು ಸ್ಪಷ್ಟಪಡಿಸಿದರು.
ಲೋಕಾಯುಕ್ತರ ಆಯ್ಕೆ ಕುರಿತ ಸಭೆ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಸಭೆ ರದ್ದಾಗಿರುವುದು ನನಗೆ ಗೊತ್ತಿಲ್ಲ ಎಂದು ಕಾಗೋಡು ತಿಮ್ಮಪಪ್ಪ ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


