ಜಿಲ್ಲಾ ಸುದ್ದಿ

ಸ್ವಚ್ಛತೆ ವೇಳೆ ಬಾವಿಗೆ ಬಿದ್ದು ಕಾರ್ಮಿಕ ಸಾವು

ಕಸ ಶೇಖರಣೆಯಾಗಿದ್ದ ಬಾವಿ ಸ್ವಚ್ಛಗೊಳಿಸುತ್ತಿದ್ದ ಇಬ್ಬರು ಕಾರ್ಮಿಕರ ಪೈಕಿ ಓರ್ವ ಮೃತಪಟ್ಟು ಮತ್ತೊಬ್ಬ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಗಳವಾರ ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ...

ಸ್ವಚ್ಛತೆ ವೇಳೆ ಬಾವಿಗೆ ಬಿದ್ದು ಕಾರ್ಮಿಕ ಸಾವು
(ಸಾಂದರ್ಭಿಕ ಚಿತ್ರ)
Published On :

ಬೆಂಗಳೂರು: ಕಸ ಶೇಖರಣೆಯಾಗಿದ್ದ ಬಾವಿ ಸ್ವಚ್ಛಗೊಳಿಸುತ್ತಿದ್ದ ಇಬ್ಬರು ಕಾರ್ಮಿಕರ ಪೈಕಿ ಓರ್ವ ಮೃತಪಟ್ಟು ಮತ್ತೊಬ್ಬ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ  ಮಂಗಳವಾರ ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೃಷ್ಣಮೂರ್ತಿ ಕಾಲೋನಿ ನಿವಾಸಿ ಇಯಾಜ್ (23) ಮೃತಪಟ್ಟ ಕಾರ್ಮಿಕ. ಈತ ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ. ಮಹಮದ್ ಸಲೇಯುದ್ದೀನ್ ಅಪಾಯದಿಂದ ಪಾರಾದವರು.

ವಿಲ್ಸನ್ ಗಾರ್ಡನ್ ನ 10ನೇ ಕ್ರಾಸ್ ವೀಣಾ ಸರ್ವಿಸ್ ಸೆಂಟರ್ ಸಮೀಪವಿರುವ ಬಾವಿಯಲ್ಲಿ ಕಸ ಶೇಖರಣೆಯಾಗಿ ದುರ್ನಾತ ಬೀರುತ್ತಿತ್ತು. ಹಾಗಾಗಿ ಇಬ್ಬರೂ ಬಾವಿ ಸ್ವಚ್ಛತೆಗೆ ಮುಂದಾಗಿದ್ದಾರೆ. ಈ ವೇಳೆ ಇಯಾಜ್ ಕಾಲು ಜಾರಿ ಬಾವಿಗೆ ಬಿದ್ದಿದ್ದು ನೀರಿನಲ್ಲಿ ಮುಳುಗಿದ್ದಾನೆ. ಸಲೇಯುದ್ದೀನ್ ಕೊಂಚದರಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸ್ ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ತಕ್ಷಣ ಕಾರ್ಯ ಪ್ರವೃತ್ತರಾಗಿ ಇಯಾಜ್ ನನ್ನು ಬಾವಿಯಿಂದ ಮೇಲಿತ್ತಿ ಸಮೀಪದ ಆಸ್ಪತ್ರೆಗೆ ಸಾಗಿಸಿದರಾದರೂ ಆ ವೇಳೆಗೆ ಆತ ಕೊನೆಯುಸಿರೆಳೆದಿದ್ದ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.