ಜಿಲ್ಲಾ ಸುದ್ದಿ

ಬೆಂಗಳೂರು ರೈಲು ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನ ಹೆಸರು

ನಗರದ ಕೇಂದ್ರ ರೈಲ್ವೇ ನಿಲ್ದಾಣಕ್ಕೆ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ಧಾಣವೆಂದು ನಾಮಕರಣ ಮಾಡುವ ಆಡಳಿತಾತ್ಮಕ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಕಾರ್ಯಕ್ರಮ ಆಯೋಜಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು...

ಬೆಂಗಳೂರು ರೈಲು ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನ ಹೆಸರು
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮರಣೋತ್ಸವದ ಅಂಗವಾಗಿ ಬೆಂಗಳೂರು ರೈಲ್ವೆ ನಿಲ್ದಾಣದ ಮುಂದಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ ಬಳಿ ವಿವಿಧ ಕಲಾತಂಡಗಳು ಪ್ರದರ್ಶನ ನೀಡಿದವು.
Published On :

ಬೆಂಗಳೂರು: ನಗರದ ಕೇಂದ್ರ ರೈಲ್ವೇ ನಿಲ್ದಾಣಕ್ಕೆ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ಧಾಣವೆಂದು ನಾಮಕರಣ ಮಾಡುವ ಆಡಳಿತಾತ್ಮಕ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಕಾರ್ಯಕ್ರಮ ಆಯೋಜಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಂಗೊಳ್ಳಿ ರಾಯಣ್ಣರ 185ನೇ ಪುಣ್ಯಸ್ಮರಣೆ ಅಂಗವಾಗಿ ನಗರ ರೈಲು ನಿಲ್ದಾಣದ ಮುಂದೆ ಸಂಗೊಳ್ಳಿ ರಾಯಣ್ಣನ ಪುತ್ಥಲಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಸಿಎಂ. ಕೇಂದ್ರ ಸರ್ಕಾರ ಬೆಂಗಳೂರು ಕೇಂದ್ರ ರೈಲು ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನ ಹೆಸರನ್ನು ನಾಮಕರಣ ಮಾಡುವುದಾಗಿ ಈಗಾಗಲೇ ಘೋಷಿಸಿದೆ.

ಈ ನಿಟ್ಟಿನಲ್ಲಿ ಆಡಳಿತಾತ್ಮಕ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ನಾಮಕರಣ ಕಾರ್ಯಕ್ರಮವನ್ನು ಶೀಘ್ರವೇ ಆಯೋಜಿಸುವಂತೆ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ನೆನಪಿಸಲಾಗುವುದು. ರಾಯಣ್ಣನ ಪ್ರತಿಮೆ ಸ್ಥಳದಲ್ಲಿರುವ ಕಿರು ಉದ್ಯಾನದ ಅಭಿವೃದ್ಧಿಗೆ ಪಾಲಿಕೆ ಕ್ರಮ ಕೈಗೊಳ್ಳಲಿದೆ. ಪ್ರತಿಮೆ ಬಳಿ ಸಿಸಿಟಿವಿ ಅಳವಡಿಕೆ ಜತೆಗೆ ಪ್ರತಿಮೆ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಸ್ವಾತಂತ್ರ್ಯ ದಿನದಂದು ಹುಟ್ಟಿ, ಒಬ್ಬ ಮಹಾನ್ ದೇಶಭಕ್ತನಾಗಿ ಗಣರಾಜ್ಯೋತ್ಸವದಂದು ಹುತಾತ್ಮರಾದ ಸಂಗೊಳ್ಳಿ ರಾಯಣ್ಣ, ಇತಿಹಾಸದ ಪುಟಗಳಲ್ಲಿ ಚಿರಸ್ಥಾಯಿಯಾಗಿದ್ದಾರೆ. ಈ ಎರಡೂ ದಿನ ನಾವು ನಾಡಿಗಾಗಿ ದೇಶ ಸೇವೆಗಾಗಿ ಸಮರ್ಪಿಸಿಕೊಳ್ಳಲು ಸಂಕಲ್ಪಿಸುವ ನಿಟ್ಟಿನಲ್ಲಿ ಪ್ರೇರಣೆಯಾಗಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಹಾಪೌರ ಬಿ.ಎನ್.ಮಂಜುನಾಥ ರೆಡ್ಡಿ, ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಆರ್.ಎಸ್.ಸತ್ಯನಾರಾಯಣ, ನಗರ ಪಾಲಿಕೆ ಸದಸ್ಯರು, ಕವಿ. ಸಿ.ವಿ.ಶಿವಶಂಕರ್, ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನದ ಸಂಗೊಳ್ಳಿ ಕೃಷ್ಣಮೂರ್ತಿ ಮತ್ತಿತರರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.