ಜಿಲ್ಲಾ ಸುದ್ದಿ

ಮದುವೆ ದಿಬ್ಬಣದ ಬಸ್‌-ಲಾರಿ ನಡುವೆ ಅಪಘಾತ: 5 ಸಾವು

ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲ್ಲೂಕು ಮ್ಯಾದನೇರಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಮದುವೆ ದಿಬ್ಬಣಕ್ಕೆ ತೆರಳುತ್ತಿದ್ದ ಬಸ್‌ ಮತ್ತು ಲಾರಿ ಮಧ್ಯೆ ಅಪಘಾತ...

ಮದುವೆ ದಿಬ್ಬಣದ ಬಸ್‌-ಲಾರಿ ನಡುವೆ ಅಪಘಾತ: 5 ಸಾವು
ಅಪಘಾತ
Published On :

ಕೊಪ್ಪಳ: ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲ್ಲೂಕು ಮ್ಯಾದನೇರಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಮದುವೆ ದಿಬ್ಬಣಕ್ಕೆ ತೆರಳುತ್ತಿದ್ದ ಬಸ್‌ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿದ್ದು ಐವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಅಪಘಾತದಲ್ಲಿ ಬಾಲಕ ಮತ್ತು ಮಹಿಳೆ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದು, ಮೃತರು ಮಹಾರಾಷ್ಟ್ರದ ಅಹಮದ್‌ ನಗರ ಮೂಲದವರು ಎಂದು ತಿಳಿದುಬಂದಿದೆ.

ಲಾರಿ ಮತ್ತು  ಮಿನಿ ಬಸ್ ಮಧ್ಯೆ ಅಪಘಾತ ಸಂಭವಿಸಿದ್ದು ಒಬ್ಬ ಬಾಲಕ ಹಾಗೂ ಮಹಿಳೆ ಸೇರಿದಂತೆ ದಿಬ್ಬಣಕ್ಕೆ ತೆರಳುತ್ತಿದ್ದ ಐವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಬಾಲಗಕೋಟೆ ಜಿಲ್ಲಾ ಆಸ್ಪತ್ರೆ ಹಾಗೂ ಇಳಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೇವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.