ಗೌಡರ ಮನವೊಲಿಕೆಗೆ ಷರೀಫ್ ಯತ್ನ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರೋಧಧ ನಡುವೆಯೂ ತಮ್ಮ ಮೊಮ್ಮಗನಿಗೆ ಹೆಬ್ಬಾಳ ಕ್ಷೇತ್ರದ ಟಿಕೆಟ್ ಗಿಟ್ಟಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಸಿ.ಕೆ.ಜಾಫರ್ ಷರೀಫ್ ಈಗ ಗೆಲುವಿನ ದಡ ಸೇರಲು ಸರ್ವ ಪರ್ಯತ್ನಗಳಿಗೂ ಕೈ ಹಾಕಿದ್ದಾರೆ...

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರೋಧಧ ನಡುವೆಯೂ ತಮ್ಮ ಮೊಮ್ಮಗನಿಗೆ ಹೆಬ್ಬಾಳ ಕ್ಷೇತ್ರದ ಟಿಕೆಟ್ ಗಿಟ್ಟಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಸಿ.ಕೆ.ಜಾಫರ್ ಷರೀಫ್ ಈಗ ಗೆಲುವಿನ ದಡ ಸೇರಲು ಸರ್ವ ಪರ್ಯತ್ನಗಳಿಗೂ ಕೈ ಹಾಕಿದ್ದಾರೆ.
ಸ್ವಪಕ್ಷೀಯರನ್ನು ಒಲಿಸಿಕೊಳ್ಳುವುದರ ಜತೆಗೆ ಮಾಜಿ ಪ್ರಧಾನಿ ದೇವೇಗೌಡರ ಬೆಂಬಲ ಗಿಟ್ಟಿಸುವ ಪ್ರಯತ್ನ ಮುಂದುವರೆಸಿದ್ದಾರೆ.
ಹೆಬ್ಬಾಳ ಕ್ಷೇತ್ರದಲ್ಲಿ ತಮ್ಮ ಮೊಮ್ಮಗ, ಕಾಂಗ್ರೆಸ್ ಅಭ್ಯರ್ಥಿ ರೆಹಮಾನ್ ಷರೀಫ್ ಗೆಲ್ಲಲೇಬೇಕಾಗಿರುವ ಸವಾಲು ಎದುರಿಸುತ್ತಿರುವ ಕೇಂದ್ರ ಮಾಜಿ ಸಚಿವ ಜಾಫರ್ ಷರೀಫ್ ಅವರು ಗುರುವಾರ ದೇವೇಗೌಡರನ್ನು ಭೇಟಿಯಾಗಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ ಎನ್ನಲಾಗಿದೆ.
ಹೆಬ್ಬಾಳ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರು, ಒಕ್ಕಲಿಗರ ಮತಗಳೇ ನಿರ್ಣಾಯಕವಾಗಿದ್ದು ಜೆಡಿಎಸ್ ನಿಂದಲೂ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿ ಸ್ಪರ್ಥಿಸಿರುವುದರಿಂದ ಅಲ್ಪಸಂಖ್ಯಾತ ಮತಗಳು ವಿಭಜನೆಯಾಗಿ ಬಿಜೆಪಿಗೆ ಲಾಭವಾಗಬಹುದೆಂಬ ಆತಂಕ ಕಾಡುತ್ತಿದೆ. ಈ ನಿಟ್ಟಿನಲ್ಲಿ ದೇವೇಗೌಡರ ಮನವೊಲಿಸಿ ಜೆಡಿಎಸ್ ಅಭ್ಯರ್ಥಿಯನ್ನು ಕಣದಿಂದ ಹಿಂಪಡೆಯುವಂತೆ ಮಾಡುವ ನಿಟ್ಟಿನಲ್ಲಿ ತಮ್ಮ ಪ್ರಯತ್ನಗಳನ್ನು ಮುಂದುವರಿಸಿರುವ ಷರೀಫ್, ಗುರುವಾರ ದಿನವಿಡೀ ದೇವೇಗೌಡರ ಸಂಪರ್ಕ ಸಾಧಿಸಲು ಪ್ರಯತ್ನಿಸಿದ್ದರೂ ಯಶಸ್ವಿಯಾಗಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


