ಡಿಜಿಟಲ್ ನಿಲ್ದಾಣ ತೆರವು ಕೈಬಿಟ್ಟ ಪಾಲಿಕೆ
ನಗರದ ಹಳೇ ಮದ್ರಾಸ್ ರಸ್ತೆಯಲ್ಲಿ ಬುಧವಾರ ಉದ್ಘಾಟನೆಯಾದ ಡಾ.ಎಪಿಜೆ ಅಬ್ದುಲ್ ಕಲಾಂ ವಿಷನ್ 2020 ಡಿಜಿಟಲ್ ಬಸ್ ನಿಲ್ದಾಣವನ್ನು ತೆರವುಗೊಳಿಸಲು ಮುಂದಾದ ಬಿಬಿಎಂಪಿ ಅಧಿಕಾರಿಗಳ ಕ್ರಮಕ್ಕೆ...

ಬೆಂಗಳೂರು: ನಗರದ ಹಳೇ ಮದ್ರಾಸ್ ರಸ್ತೆಯಲ್ಲಿ ಬುಧವಾರ ಉದ್ಘಾಟನೆಯಾದ ಡಾ.ಎಪಿಜೆ ಅಬ್ದುಲ್ ಕಲಾಂ ವಿಷನ್ 2020 ಡಿಜಿಟಲ್ ಬಸ್ ನಿಲ್ದಾಣವನ್ನು ತೆರವುಗೊಳಿಸಲು ಮುಂದಾದ ಬಿಬಿಎಂಪಿ ಅಧಿಕಾರಿಗಳ ಕ್ರಮಕ್ಕೆ ಸಾರ್ವಜನಿಕರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪಾಲಿಕೆಯ ಅಧಿಕಾರಿಗಳು ತೆರವು ಕಾರ್ಯ ಕೈಬಿಟ್ಟರು.
ಐಟಿಐ ಬಳಿ ಅನಧಿಕೃತ ಬಸ್ ನಿಲ್ದಾಣ ನಿರ್ಮಾಣವಾಗಿರುವ ಕುರಿತು ಸ್ಥಳೀಯ ಪಾಲಿಕೆ ಸದಸ್ಯೆ ಪೂರ್ಣಿಮಾ ಶ್ರೀನಿವಾಸ್ ಅವರು ಕೌನ್ಸಿಲ್ ಸಭೆಯಲ್ಲಿ ಆರೋಪಿಸಿ ನಿಲ್ದಾಣವನ್ನು ತೆರವುಗೊಳಿಸದಿದ್ದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ ಬಿಬಿಎಂಪಿ ಜಂಟಿ ಆಯುಕ್ತರ ನೇತೃತ್ವದಲ್ಲಿ ಅಧಿಕಾರಿಗಳು ಜೆಸಿಬಿ ಮೂಲಕ ತೆರವಿಗೆ ಮುಂದಾದರು.
ನಿಲ್ದಾಣವನ್ನು 2 ದಿನಗಳ ಹಿಂದೆ ಶಾಸಕ ಬಿ.ಎ.ಬಸವರಾಜ್ ಉದ್ಘಾಟಿಸಿದ್ದರು. ಶುಕ್ರವಾರ ಮಹದೇವಪುರ ಜಂಟಿ ಆಯುಕ್ತ ಉಮಾನಂದ ರೈ ಅವರು ಅಧಿಕಾರಿಗಳೊಂದಿಗೆ ತೆರವುಗೊಳಿಸಲು ಮುಂದಾದಾಗ ಪಾಲಿಕೆ ಸದಸ್ಯರಾದ ಕೆ.ಶ್ರೀಕಾಂತ್ ಮತ್ತು ಸುರೇಶ್ ಸೇರಿ ನೂರಾರು ಸಾರ್ವಜನಿಕರು ನಿಲ್ದಾಣವನ್ನು ತೆರವುಗೊಳಿಸದಂತೆ ಅಧಿಕಾರಿಗಳಲ್ಲಿ ಮನವಿ ಮಾಡಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಕೈ ಬಿಟ್ಟರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


