ಮಾತುಕತೆಗೆ ನಿರಾಕರಣೆ, ತೀರ್ಪು ಬರುವವರೆಗೂ ಕಾಯಿರಿ: ಮಹಾದಾಯಿ ಸಂಬಂಧ ಸಿಎಂ ಗೆ ಉಮಾಭಾರತಿ ಪತ್ರ
ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ಕರ್ನಾಟಕದ ಮಾತುಕತೆ ಪ್ರಸ್ತಾಪಕ್ಕೆ ಸಂಬಂಧಿಸಿದಂತೆ ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾಭಾರತಿ ಸಿಎಂ....

ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ಕರ್ನಾಟಕದ ಮಾತುಕತೆ ಪ್ರಸ್ತಾಪಕ್ಕೆ ಸಂಬಂಧಿಸಿದಂತೆ ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾಭಾರತಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಮಾತುಕತೆ ಮೂಲಕ ವಿವಾದ ಬಗೆಹರಿಸಿಕೊಳ್ಳಲು ಸಿದ್ದವಿದ್ದ ರಾಜ್ಯ ಸರ್ಕಾರಕ್ಕೆ ನಿರಾಶೆಯಾಗಿದೆ. ಮಾತುಕತೆಗೆ ಉಮಾಭಾರತಿ ನಿರಾಕರಿಸಿರುವುದು ಉತ್ತರ ಕರ್ನಾಟಕದ ಭಾಗದ ಜನರಿಗೆ ಆಘತವಾಗಿದೆ. ಅಂತಿಮ ತೀರ್ಪು ಬರುವವರೆಗೆ ಕಾಯಿರಿ, ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆಯಿಡಿ ಎಂದು ಉಮಾಭಾರತಿ ಪತ್ರದಲ್ಲಿ ಹೇಳಿದ್ದಾರೆ,
ಗೋವಾ ಮುಖ್ಯಮಂತ್ರಿ ಕೂಡ ಅದೇ ರೀತಿಯ ಪತ್ರ ಬರೆದಿರುವುದು ಉತ್ತರ ಕರ್ನಾಟಕ ಭಾಗದ ಜನರು ನೂರಾರು ದಿನಗಳಿಂದ ಮಾಡುತ್ತಿದ್ದ ಪ್ರತಿಭಟನೆಯು ಈಗ ನೀರಿನಲ್ಲಿ ಹೋಮಮಾಡಿದಂತಾಗಿದೆ. ಅಪ್ಪ, ಅಮ್ಮ ಜಗಳದಿಂದ ಕೂಸು ಬಡವಾಯ್ತು ಎಂಬ ಹಾಗೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವೈಮನಸ್ಸಿನಿಂದ ಕರ್ನಾಟಕದ ಉತ್ತರಕರ್ನಾಟಕ ಭಾಗದ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


