ಜಿಲ್ಲಾ ಸುದ್ದಿ

ರಮೇಶ್ ಆರೋಪದಲ್ಲಿ ಹುರುಳಿಲ್ಲ

ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ರಾಜಕೀಯ ದ್ವೇಷದ ಮಾತುಗಳನ್ನು ಆಡುವ ಮೂಲಕ ಈಗಿನ ಆಡಳಿತ ಪಕ್ಷದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಸತ್ಯನಾರಾಯಣ ತಿರುಗೇಟು ನೀಡಿದ್ದಾರೆ...

ರಮೇಶ್ ಆರೋಪದಲ್ಲಿ ಹುರುಳಿಲ್ಲ
ರಮೇಶ್ ಆರೋಪದಲ್ಲಿ ಹುರುಳಿಲ್ಲ
Published On :

ಬೆಂಗಳೂರು: ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ರಾಜಕೀಯ ದ್ವೇಷದ ಮಾತುಗಳನ್ನು ಆಡುವ ಮೂಲಕ ಈಗಿನ ಆಡಳಿತ ಪಕ್ಷದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಸತ್ಯನಾರಾಯಣ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ನ ಕೆಲ ಶಾಸಕರ ಒತ್ತಡಕ್ಕೆ ಮಣಿದ ಬಿಬಿಎಂಪಿ ಅಧಿಕಾರಿಗಳು ಸುಮಾರು ರು. 155 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ ಎಂಬ ರಮೇಶ್ ಅವರ ಆರೋಪಕ್ಕೆ ತಿರುಗೇಟು ನೀಡಿರುವ ಸತ್ಯನಾರಾಯಣ, ಬಿಬಿಎಂಪಿಯಲ್ಲಿ ಅಂತಹ ಯಾವುದೇ ಹಗರಣ ನಡೆದಿಲ್ಲ. ಬಿಬಿಎಂಪಿ ಅಧಿಕಾರ ಹಿಡಿಯುವಲ್ಲಿ ರಾಜರಾಜೇಶ್ವರಿನಗರ ಕೆ.ಆರ್.ಪುರಂ, ಯಶವಂತಪುರ ಕ್ಷೇತ್ರದ ಕಾಂಗ್ರೆಸ್ ಶಾಸಕರು ಕಾರಣರಾಗಿರುವ ಹಿನ್ನೆಲೆಯಲ್ಲಿ ರಾಜಕೀಯ ದ್ವೇಷದಿಂದ ರಮೇಶ್ ಆರೋಪ ಮಾಡಿದ್ದಾರೆ. ಬಿಬಿಎಂಪಿಯಲ್ಲಿ ಕಾಂಗ್ರೆಸ್ ಬಂದ ಬಳಿಕ ಇದುವರೆಗೆ ಒಂದೇ ಒಂದೂ ಎಲ್ ಒಸಿ ಕೊಟ್ಟಿಲ್ಲ ಎಂಬುದನ್ನು ರಮೇಶ್ ಮನಗಾಣಬೇಕು ಎಂದು ತಾಕೀತು ಮಾಡಿದ್ದಾರೆ.

ಬಿಬಿಎಂಪಿಯಿಂದ ಕಾಮಗಾರಿ ಮುಗಿಯುವ ಮುನ್ನವೇ ಹಣ ನೀಡಲಾಗಿದೆ ಎಂಬ ಆರೋಪವೂ ನಿರಾಧಾರದಿಂದ ಕೂಡಿದೆ ಎಂದು ಸತ್ಯಾನಾರಾಯಣ ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.