ಅಡ್ಡಾದಿಡ್ಡಿ ಕಾರು ಚಾಲನೆ: ಮಹಿಳೆ ಸಾವು
ಕುಡಿದ ಅಮಲಿನಲ್ಲಿ ನೈಜೀರಿಯಾ ವಿದ್ಯಾರ್ಥಿಗಳು ಅಡ್ಡಾದಿಡ್ಡಿ ಕಾರು ಚಲಾಯಿಸಿ ಸ್ಕೂಟರ್ ಗೆ ಡಿಕ್ಕಿ ಹೊಡೆಸಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಲದೇವನಹಳ್ಳಿಯ ಗಣಪತಿ ದೇವಾಲಯದ ಬಳಿ ಭಾನುವಾರ ನಡೆದಿದೆ...

ಬೆಂಗಳೂರು: ಕುಡಿದ ಅಮಲಿನಲ್ಲಿ ನೈಜೀರಿಯಾ ವಿದ್ಯಾರ್ಥಿಗಳು ಅಡ್ಡಾದಿಡ್ಡಿ ಕಾರು ಚಲಾಯಿಸಿ ಸ್ಕೂಟರ್ ಗೆ ಡಿಕ್ಕಿ ಹೊಡೆಸಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಲದೇವನಹಳ್ಳಿಯ ಗಣಪತಿ ದೇವಾಲಯದ ಬಳಿ ಭಾನುವಾರ ನಡೆದಿದೆ.
ಇದರಿಂದ ಆಕ್ರೋಶಗೊಂಡ ಸ್ಥಳೀಯರು ಎರಡು ಕಾರುಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೆಸರುಘಟ್ಟದ ನಿವಾಸಿ ಶಬನಾ ಜಾಜ್ (35) ಮೃತಪಟ್ಟ ಮಹಿಳೆ. ಘಟನೆ ಸಂಬಂಧ ನಾಲ್ವರು ನೈಜೀರಿಯಾ ಮೂಲದ ವಿದ್ಯಾರ್ಥಿಗಳನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭಾನುವಾರ ರಾತ್ರಿ ಕಂಠಪೂರ್ತಿ ಕುಡಿದು ಹೆಸರುಘಟ್ಟ ಮುಖ್ಯರಸ್ತೆಯ ಗಣಪತಿನಗರದ ಬಳಿಯಿರುವ ಆಚಾರ್ಯ ಕಾಲೇಜಿನ ಮುಖ್ಯರಸ್ತೆಯ ಸಾಯಿಬಾಬಾ ಮಂದಿರದ ಬಳಿ ಬರುತ್ತಿದ್ದಂತೆ ಎದುರುಗಡೆ ಬೈಕ್ ನಲ್ಲಿ ಬಂದ ಮಹಿಳೆಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


