ಜಿಲ್ಲಾ ಸುದ್ದಿ

ಕಾಂಗ್ರೆಸ್ ನ ಬಿಸೆಗೌಡ ಬಿಜೆಪಿ ತೆಕ್ಕೆಗೆ

ಹೆಬ್ಬಾಳ ಉಪಚುನಾವಣೆಯಲ್ಲಿ ಚುನಾವಣಾ ಪ್ರಚಾರ ಕಾವು ಪಡೆದುಕೊಂಡಿದ್ದು, ಭಾನುವಾರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿಸೆಗೌಡ ಅವರು ಕಾಂಗ್ರೆಸ್ ಪಕ್ಷ ತೊರೆದು ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದಗೌಡರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದರು...

ಕಾಂಗ್ರೆಸ್ ನ ಬಿಸೆಗೌಡ ಬಿಜೆಪಿ ತೆಕ್ಕೆಗೆ
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿಸೆಗೌಡ ಭಾನುವಾರ ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದಗೌಡರ ಸಮ್ಮುಖದಲ್ಲಿ ಬಿಜೆಪಿ ಸೇರಿದಾಗ ಸ್ವಾಗತ ಕೋರಲಾಯಿತು.
Published On :

ಬೆಂಗಳೂರು: ಹೆಬ್ಬಾಳ ಉಪಚುನಾವಣೆಯಲ್ಲಿ ಚುನಾವಣಾ ಪ್ರಚಾರ ಕಾವು ಪಡೆದುಕೊಂಡಿದ್ದು, ಭಾನುವಾರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿಸೆಗೌಡ  ಅವರು ಕಾಂಗ್ರೆಸ್ ಪಕ್ಷ ತೊರೆದು ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದಗೌಡರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದರು.

ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ ತಮ್ಮ ಶಿಷ್ಯ ಜಗದೀಶ್ ಕುಮಾರ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಬಾರಿಯೂ ಅದೇ ನೀತಿ ಅನುಸರಿಸಿರುವ ನಾಯ್ಡು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಬಿಸೆಗೌಡರನ್ನು ಬಿಜೆಪಿಗೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿಯಿಂದ ಕೈಗೊಂಡಿರುವ ಪ್ರಚಾರದ ಭರಾಟೆಯು ನಾಯಕರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಇವರ ದೆಸೆಯಿಂದಲೇ ಟಿಕೆಟ್ ಪಡೆದು ಕಣದಲ್ಲಿರುವ ಎ.ವೈ.ನಾರಾಯಣಸ್ವಾಮಿ ಕ್ಷೇತ್ರಾದ್ಯಂತ ಮತ ಪ್ರಚಾರದಲ್ಲಿ ನಿರತರಾಗಿದ್ದಾರೆ.

ಹೆಬ್ಬಾಳ ಕ್ಷೇತ್ರದ ಚೋಳನಾಯಕನಹಳ್ಳಿಯಲ್ಲಿ ಏರ್ಪಡಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ್ದ ಡಿ.ವಿ.ಸದಾನಂದ ಗೌಡ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುವಂತೆ ಕರೆ ನೀಡಿದರು. ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ ಮಾತನಾಡಿ, ಹೆಬ್ಬಾಳ ಉಪ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿಗೆ ನೇರ ಹಣಾಹಣಿಯಿದೆ. ಕಾಂಗ್ರೆಸ್ ನಾಯಕರ ಒಳಜಗಳದಿಂದಾಗಿ ಕಾಂಗ್ರೆಸ್ ಅಭ್ಯರ್ಥಿ ಅನಾಥವಾಗಿದ್ದಾರೆ ಎಂದು ವ್ಯಂಗ್ಯವಾಡಿದರು. ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಅಭ್ಯರ್ಥಿ ಎ.ವೈ.ನಾರಾಯಣಸ್ವಾಮಿ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.

ಇಬ್ಬರ ನಾಮಪತ್ರ ವಾಪಸ್
ತೀವ್ರ ಕುತೂಹಲ ಕೆರಳಿಸಿರು ಹೆಬ್ಬಾಳ ವಿಧಾಸಭಾ ಕ್ಷೇತ್ರದ ಉಪಚುನಾವಣೆಗೆ ನಾಮಪತ್ರ ವಾಪಸ್ ಪಡೆಯಲು ಕೊನೆ ದಿನವಾಗಿದ್ದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದು ಅಂತಿಮವಾಗಿ 20 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಫೆ.13 ರಂದು ನಡೆಯಲಿರುವ ಚುನಾವಣೆಗೆ ಒಟ್ಟು 22 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಶನಿವಾರ ಮೊಹಮ್ಮದ್ ಆಯೂಬ್ ಮತ್ತು ಪದ್ಮನಾಭನ್ ಆರ್.ನಾಮಪತ್ರ ವಾಪಸ್ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.