ಬಾಗಲಕೋಟೆ

ಮಹಾರಾಣಿ ಕೆರೆಗೆ ಘಟಪ್ರಭಾ ನೀರು

Published On :

ಮುಧೋಳ:  ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ವೆಂಕಟೇಶ(ಮಹಾರಾಣಿ) ಕೆರೆಗೆ ಭಾನುವಾರ  ಘಟಪ್ರಭಾ ಎಡದಂಡೆ ಕಾಲುವೆ ನೀರನ್ನು ತುಂಬಿಸಿಕೊಳ್ಳಲಾಗುತ್ತಿದೆ. 385 ಎಂಸಿಎಫ್‌ಟಿ ನೀರು ಸಂಗ್ರಹಿಸುವ ಸಾಮರ್ಥ್ಯದ ಕೆರೆಯನ್ನು ಒಮ್ಮೆ ಭರ್ತಿ ಮಾಡಿಕೊಂಡರೆ ಮುಧೋಳ ಪಟ್ಟಣದ ಒಟ್ಟೂ 27 ವಾರ್ಡಗಳಿಗೆ ವಾರಕ್ಕೊಮ್ಮೆಯಂತೆ ಬಿಟ್ಟರೆ ಮೂರ್ನಾಲ್ಕು ತಿಂಗಳವರೆಗೆ ಸಾಕಾಗುತ್ತದೆ. ಅಂದರೆ 2013ರ ಮೇ ತಿಂಗಳ ವರೆಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದು ಎಂದು ಮುಧೋಳ ಪುರಸಭೆ ಮುಖ್ಯಾಧಿಕಾರಿ ರಮೇಶ ಸುಣಗಾರ “OÚ«Ú­sÚ®Úúڒ ಕ್ಕೆ ತಿಳಿಸಿದರು.
ಅವರು ಸೋಮವಾರ ಪತ್ರಿಕೆಯೊಂದಿಗೆ ಮಾತನಾಡಿ, ಬೇಸಿಗೆಯಲ್ಲಿ ನಗರದ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಈಗಾಗಲೇ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ. ಕುಡಿಯುವ ನೀರಿಗಾಗಿ ಬೇಕಾಗುವ ಎಲ್ಲ ಸೌಲಭ್ಯ ಒದಗಿಸುವುದಾಗಿ ಸಚಿವ ಗೋವಿಂದ ಕಾರಜೋಳ, ಜಿಲ್ಲಾಧಿಕಾರಿ ಎ.ಎಂ. ಕುಂಜಪ್ಪ, ಜಮಖಂಡಿ ಉಪ-ವಿಭಾಗಾಧಿಕಾರಿ ಅಶೋಕ ದುರಗುಂಡಿ ಅವರು ತಿಳಿಸಿದ್ದಾರೆ ಎಂದು ಅವರು ತಿಳಿಸಿದರು.   
ೆಎರಡು ದಿನಗಳಲ್ಲಿ ಕೆರೆ ಭರ್ತಿಯಾಗಲಿದ್ದು, ಬಳಿಕ ಸಚಿವ ಕಾರಜೋಳ ಅವರಿಂದ ಬಾಗೀನ ಅರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಜಮಖಂಡಿ ಉಪ ವಿಭಾಗಾಧಿಕಾರಿ ಅಶೋಕ ಗುರಗುಂಡಿ, ಜಮಖಂಡಿ ತಹಸೀಲ್ದಾರ ಜಿ.ಎಲ್. ಮೇತ್ರಿ, ಮುಖ್ಯಾಧಿಕಾರಿ ರಮೇಶ ಸುಣಗಾರ, ಅಭಿಯಂತರ ಅಶೋಕ ಬೆಳಕೂಡ, ವಿ.ಜಿ. ಕುಲಕರ್ಣಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.