ಬೆಂಗಳೂರು ಗ್ರಾಮಾಂತರ

ಸುವರ್ಣ ಗ್ರಾಮ ಯೋಜನೆಯಿಂದ ಪಟ್ಟಣ ಸೌಕರ್ಯ

Published On :

ಚನ್ನಪಟ್ಟಣ: ಪಟ್ಟಣ ಪ್ರದೇಶದಂತೆ ಗ್ರಾಮಾಂತರ ಪ್ರದೇಶಕ್ಕೂ ಮೂಲ ಸೌಕರ್ಯ ಕಲ್ಪಿಸುವ ಉದ್ದೇಶದಿಂದ ಸುವರ್ಣ ಗ್ರಾಮ ಯೋಜನೆ ಜಾರಿಗೆ ತರಲಾಗಿದೆ ಎಂದು ಅರಣ್ಯ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ತಾಲೂಕಿನ ಮೋಳೆದೊಡ್ಡಿ ಮತ್ತು ತಗಚಗೆರೆ ಗ್ರಾಮಗಳ ರಸ್ತೆ ಅಭಿವೃದ್ಧಿ ಮತ್ತು ಸುವರ್ಣ ಗ್ರಾಮ ಯೋಜನೆ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿ, ಸುವರ್ಣ ಗ್ರಾಮ ಯೋಜನೆಯಲ್ಲಿ ಗ್ರಾಮಗಳಿಗೆ ರಸ್ತೆ, ಚರಂಡಿ, ಅಂಗನವಾಡಿ ಮತ್ತು ಸಮುದಾಯ ಭವನ ನಿರ್ಮಾಣ ಮಾಡಲಿರುವುದಾಗಿ ತಿಳಿಸಿದರು.
ಮುಂದಿನ ದಿನಗಳಲ್ಲಿ ತಾಲೂಕಿನ ಮತ್ತಷ್ಟು ಗ್ರಾಮಗಳನ್ನು ಯೋಜನೆ ವ್ಯಾಪ್ತಿಗೆ ಸೇರ್ಪಡೆಗೊಳಿಸುವುದಾಗಿ ಸಚಿವರು ತಿಳಿಸಿದರು.
ಸುವರ್ಣ ಗ್ರಾಮ ಯೋಜನೆಗೆ ಸೇರ್ಪಡೆಗೊಂಡಿರುವ ಗ್ರಾಮಗಳಿಗೆ 1.19 ಕೋಟಿ ಅನುದಾನ ಬಿಡುಗಡೆಯಾಗಿದ್ದು ಮೋಳೆದೊಡ್ಡಿ ಗ್ರಾಮಕ್ಕೆ 43 ಲಕ್ಷ, ತಗಚಗೆರೆ ಗ್ರಾಮಕ್ಕೆ 76 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಬ್ರಹ್ಮಣೀಪುರ ರಸ್ತೆ ಅಭಿವೃದ್ದಿಗಾಗಿ ನಬಾರ್ಡ್‌ನಿಂದ 25 ಲಕ್ಷ, ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ 30 ಲಕ್ಷ ಮಂಜೂರಾಗಿದೆ ಎಂದರು.
ಮುಂದಿನ ಬಜೆಟ್‌ನಲ್ಲಿ ಆಶ್ರಯ ಮನೆ ನಿರ್ಮಾಣಕ್ಕೆ ಸರ್ಕಾರ 1 ಲಕ್ಷ ಸಹಾಯಧನ ಘೋಷಣೆ ಮಾಡಲಿದ್ದು, ಆನಂತರ 5 ಸಾವಿರ ಮನೆಗಳನ್ನು ತಾಲೂಕಿಗೆ ಮಂಜೂರು ಮಾಡಿಸುವುದಾಗಿ ಭರವಸೆ ನೀಡಿದರು.
ತಾಲೂಕು ಪಂಚಾಯಿತಿ ಸದಸ್ಯ ವೀರಭದ್ರಯ್ಯ, ಗ್ರಾ.ಪಂ.ಅಧ್ಯಕ್ಷೆ ಶಿವಮ್ಮ, ಸದಸ್ಯ ಬೊಮ್ಮಯ್ಯ, ತಾ.ಪಂ.ಮಾಜಿ ಸದಸ್ಯ ಶಿವಲಿಂಗಯ್ಯ, ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್, ಎಇಇ ನಾಟೀಕರ್ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.