ಯಂತ್ರೋಪಕರಣ ವಿತರಣೆ: ಸೂಚನೆ
ಮಾಗಡಿ: ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ರೈತರಿಗೆ 2012-13ನೇ ಸಾಲಿನ ರಾಷ್ಟ್ರೀಯ ವಿಕಾಸ ಯೋಜನೆಯಡಿ ಶೇ.50ರ ಸಹಾಯಧನದಲ್ಲಿ ಯಂತ್ರೋಪಕರಣ ವಿತರಿಸಲಾಗುತ್ತಿದೆ. ಆಸಕ್ತ ರೈತರು ಸೂಕ್ತ ದಾಖಲೆಯೊಂದಿಗೆ ರೈತ ಸಂಪರ್ಕ ಕೇಂದ್ರ ಅಥವಾ ಕೃಷಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಸಹಾಯಕ ಕೃಷಿ ನಿರ್ದೇಶಕ ಎಚ್.ಸಿ.ಕೃಷ್ಣಪ್ಪ ಮನವಿ ಮಾಡಿ ಕೋರಿದ್ದಾರೆ. ಪವರ್ ಟಿಲ್ಲರ್, ಸ್ಪ್ರೇಯರ್, ಬ್ರಷ್ ಕಟರ್, ವೇಟರ್ ಪ್ರೊಟಿವೇಟರ್, ಪ್ಲೋರ್ ಮಿಲ್, ಪಲ್ವಿರೇಸರ್, ರಾಗಿ ಕ್ಲೀನಿಂಗ್ ಮೆಷಿನ್, ಪಿವಿಸಿ ಪೈಪ್ಗಳನ್ನು ಶೇ.50ರ ರಿಯಾಯಿತಿ ದರದಲ್ಲಿ ವಿತರಿಸಲಾಗುವುದು ಎಂದರು.
ಆರೋಗ್ಯ ತಪಾಸಣೆ ಅವಧಿ ವಿಸ್ತರಣೆ
ಮಾಗಡಿ: ತೀವ್ರ ಪೌಷ್ಟಿಕ ಮಕ್ಕಳ ಆರೋಗ್ಯ ತಪಾಸಣೆ ತಾಲೂಕಿನ ಆಯಾ ಆರೋಗ್ಯ ಕೇಂದ್ರಗಳಲ್ಲಿ ತಪಾಸಣೆ ಮಾಡಲಾಗುತ್ತಿದೆ. ಫೆ.8 ರವರೆಗೆ ಈ ಕಾರ್ಯಕ್ರಮ ನಡೆಯುತ್ತಿದ್ದು, ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಪೋಷಕರು ಆಯಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ತಪಾಸಣೆ ಮಾಡಿಸಿಕೊಳ್ಳುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೆಂಪಣ್ಣ ತಿಳಿಸಿದ್ದಾರೆ.
ಕಲ್ಯಾಣಿ ಸ್ವಚ್ಛತೆಗೆ ಸಹಕರಿಸಲು ಮನವಿ
ಮಾಗಡಿ: ಐತಿಹಾಸಿಕ ಪ್ರಸಿದ್ಧ ತಿರುಮಲೆ ಶ್ರೀರಂಗನಾಥಸ್ವಾಮಿ ದೇವಾಲಯದ ಮುಂಭಾಗವಿರುವ ಪ್ರಸಿದ್ಧ ನಾಯಕನ ಕಲ್ಯಾಣೆಯ ಸ್ವಚ್ಛತೆಯನ್ನು ಭಾನುವಾರ ಬೆಳಿಗ್ಗೆ 9 ಗಂಟೆಗೆ ಶ್ರೀರಂಗ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ಆರಂಭಿಸಲಾಗುವುದು. ಶ್ರೀರಂಗ ಆಟೋ ಚಾಲಕರು, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಕಲ್ಯಾಣಿ ಸ್ವಚ್ಛತೆಯಲ್ಲಿ ಕೈ ಜೋಡಿಸಬೇಕು. ವಿನಾಶದ ಅಂಚಿನಲ್ಲಿರವ ನಾಯಕನ ಕಲ್ಯಾಣಿ ಉಳಿಸುವಂತೆ ಟ್ರಸ್ಟ್ ಅಧ್ಯಕ್ಷ ಸತೀಶ್ ಮನವಿ ಮಾಡಿದ್ದಾರೆ.
ನಂದಿ ಹೇಳಿಕೆಗೆ ಖಂಡನೆ
ಚನ್ನಪಟ್ಟಣ: ಎಸ್ಸಿ ಎಸ್ಟಿ ಸಮುದಾಯದವರು ಹೆಚ್ಚು ಭ್ರಷ್ಟರು ಎಂದು ಹೇಳಿಕೆ ನೀಡಿರುವ ಲೇಖಕ ಬ್ರಿಜೇಶ್ ನಂದಿ ಹೇಳಿಕೆಗೆ ದಸಂಸ ಸಂಚಾಲಕ ವೆಂಕಟೇಶ್, ಡಿ.ಹನುಮಂತು ವಿರೋಧ ವ್ಯಕ್ತಪಡಿಸಿದ್ದಾರೆ. ಆಶೀಶ್ ನಂದಿ ಬಂಧಿಸಿ ಶಿಕ್ಷೆಗೊಳ ಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಇಂದು ಪ್ರತಿಭಟನೆ
ಮಾಗಡಿ: ಹೇಮಾವತಿ ಏತ ನೀರಾವರಿ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಶೀಘ್ರ ಜಾರಿಗೊಳಿಸಬೇಕು. ಹಾಲಿನ ದರ 28ಕ್ಕೆ ಏರಿಕೆ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಹಾಲು ಉತ್ಪಾದಕ ರೈತರ ಕ್ಷೇಮಾಭಿವೃದ್ಧಿ ಸಂಘದಿಂದ ಫೆ.7ರಂದು ಬೆಳಿಗ್ಗೆ 11 ಗಂಟೆಗೆ ತಾಳೇಕೆರೆ ಹ್ಯಾಂಡ್ ಪೋಸ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೃಹತ್ ರಸ್ತೆ ತಡೆ ಹಮ್ಮಿಕೊಂಡಿರುವುದಾಗಿ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಟಿ. ಸ್ವಾಮೇಗೌಡ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

