ಸಂಭ್ರಮದ ವೈಭವೋತ್ಸವ
ದೊಡ್ಡಬಳ್ಳಾಪುರ: ಇಲ್ಲಿನ ಚಿಕ್ಕಪೇಟೆಯಲ್ಲಿರುವ ಜಿ.ಕೆ.ಪ್ರೌಢಶಾಲೆ ಮತ್ತು ಶ್ರೀಪದ್ಮವಿದ್ಯಾನಿಕೇತನದಲ್ಲಿ ವೈಭವೋತ್ಸವ-2013 ಶಾಲಾ ವಾರ್ಷಿಕೋತ್ಸವ ಸಮಾರಂಭ ಶಾಲಾ ಆವರಣದಲ್ಲಿ ಸಂಭ್ರಮದಿಂದ ನಡೆಯಿತು.
ಕಾರ್ಯಕ್ರಮವನ್ನು ಅಲ್ಟ್ರಾಟೆಕ್ ಲಿಮಿಟೆಡ್ನ ವ್ಯವಸ್ಥಾಪಕ ಎಸ್. ವೆಂಕಟರಾಮನ್ ಉದ್ಘಾಟಿಸಿದರು. ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಆಸಕ್ತಿಯನ್ನೂ ಮೂಡಿಸಬೇಕು. ಮಕ್ಕಳ ಆಂತರಿಕ ಪ್ರತಿಭೆಯನ್ನು ಗುರ್ತಿಸಿ ಪ್ರೋತ್ಸಾಹಿಸಲು ಇದು ಉತ್ತಮ ಮಾರ್ಗ. ಪೋಷಕರು ಮಕ್ಕಳ ಸಹಪಠ್ಯ ಚಟುವಟಿಕೆಗಳಿಗೆ ಹೆಚ್ಚಿನ ಒತ್ತಾಸೆ ನೀಡಬೇಕು ಎಂದರು.
ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಕೆ.ಜಿ. ರಘುರಾಮ್ ಅಧ್ಯಕ್ಷತೆ ವಹಿಸಿದ್ದರು. ಕೊಂಡಸಂದ್ರದ ಶ್ರೀ ಕಾಶಿವಿಶ್ವನಾಥ ದೇವಾಲಯದ ಟ್ರಸ್ಟಿ ಎ.ವಿ. ಕೃಷ್ಣಪ್ಪ, ಅನಿಕೇತನ ಟ್ರಸ್ಟ್ನ ಶ್ರೀಕಾಂತ್, ಜಿಕೆ ವಿದ್ಯಾ ಸಂಸ್ಥೆಯ ದಿನೇಶ್ ಮತ್ತಿತರರು ಭಾಗವಹಿಸಿದ್ದರು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮತ್ತು ವಿವಿಧ ಸಾಂಸ್ಕೃತಿಕ-ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ನೀಡಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

