ಬೆಂಗಳೂರು ಗ್ರಾಮಾಂತರ

9ರಂದು ಸೀಳು ತುಟಿ ಚಿಕಿತ್ಸೆ

Published On :


ಚನ್ನಪಟ್ಟಣ: ಟ್ರಿನಿಟಿ ಕೇರ್ ಫೌಂಡೇಶನ್ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಉಚಿತ ಸೀಳು ತುಟಿ ಮತ್ತು ಮುಖದ ಅಂಗವಿಕಲತೆ ಚಿಕಿತ್ಸಾ ಶಿಬಿರವನ್ನು 9 ರಂದು ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಮ್ಮಿ ಕೊಂಡಿರುವುದಗಿ ವೈದ್ಯ ಡಾ. ಥಾಮಸ್ ತಿಳಿಸಿದ್ದಾರೆ.ಚಿಕಿತ್ಸೆ ಅಗತ್ಯವಿರುವ ಮಕ್ಕಳು ಮತ್ತು ವಯಸ್ಕರು ಈ ಶಿಬಿರದ ಉಪಯೋಗ ಪಡೆದುಕೊಳ್ಳಬಹುದಾಗಿದ್ದು, ಅರ್ಹ ರೋಗಿಗಳಿಗೆ ಬೆಂಗಳೂರಿನ ಸಂಪಂಗಿ ರಾಮನಗರದ ಐಕಾನ್ ಆಸ್ಪತ್ರೆಯಲ್ಲಿ ಉಚಿತವಾಗಿ ನಡೆಸುವುದಾಗಿ ಮಾಹಿತಿ ನೀಡಿದ್ದಾರೆ.ಶಿಬಿರದಲ್ಲಿ ತುಟಿಯ ಮೇಲಿನ ಕಲೆ, ಮುಖದ ಮೇಲಿನ ಮಚ್ಚೆ, ಮೂಗಿನ ವಿಕಲಂಗತೆ, ಬಾಯಿ ತೆರೆಯಲು ಕಷ್ಟವಿದ್ದಲ್ಲಿ ಶಸ್ತ್ರ ಚಿಕಿತ್ಸೆ ಮೂಲಕ ಸಂಪೂರ್ಣವಾಗಿ ಗುಣಪಡಿಸಲಾಗುವುದು ಇದರ ಜತೆಯಲ್ಲಿ ಚಿಕ್ಕ ಮಕ್ಕಳಲ್ಲಿ ಕಂಡುಬರುವ ಸೀಳುತುಟಿ, ಸೀಳು ಅಂಗಳ ಕೂಡ ಸರಿಪಡಿಸಿ ಕೊಡಲಾಗುವುದು ಎಂದು ತಿಳಿಸಿದರು. ಚಿಕಿತ್ಸೆ ಮತ್ತು ವಸತಿ ನೀಡಲಿದ್ದು, ಹೆಚ್ಚಿನ ಮಾಹಿತಿಗೆ 98803-94959, 90355-25974 ಸಂಪರ್ಕಿಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.