ಬೆಂಗಳೂರು ಗ್ರಾಮಾಂತರ

ವ್ಯಕ್ತಿ ಹತ್ಯೆ: ದೂರು

Published On :

ಕನಕಪುರ:  ಕಾರಿನಲ್ಲಿ ಬರುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಲು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ತಲಘಟ್ಟಪುರ ಠಾಣಾ ವ್ಯಾಪ್ತಿಯ ಎಲೆತೋಟದ ಪಾಳ್ಯ ಸಮೀಪ ಸಂಭವಿಸಿದೆ.
ಬೆಂಗಳೂರಿನ ಶ್ರೀನಿವಾಸಪುರದ ನಿವಾಸಿ ಅಶ್ವತ್ಥನಾರಾಯಣಶೆಟ್ಟಿ (65) ಮೃತಪಟ್ಟವರು.  ಗುರವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಜನಾಪುರ ಸಮೀಪದ ತನ್ನ ಜಮೀನಿನಿಂದ ಬರುವಾಗ ಬಿಡಿಎ ವ್ಯಾಪ್ತಿಯ ಗೊಲ್ಲಹಳ್ಳಿ ಗ್ರಾಮದ ಸಮೀಪದ ಎಲೆತೋಟದಪಾಳ್ಯದ ಹತ್ತಿರ ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹತ್ಯೆಗೈದಿದ್ದಾರೆ.
ರಿಯಲ್ ಎಸ್ಟೇಟ್ ಲೇವಾದೇವಿಯೇ ಕೊಲೆಗೆ ಕಾರಣ ಎನ್ನಲಾಗಿದೆ. ಮೃತ ಅಶ್ವತ್ಥನಾರಾಯಣಶೆಟ್ಟಿ ಪುತ್ರ ಪ್ರದೀಪ್ ತಲಘಟ್ಟಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪಿಎಸ್ಐ ವಿಶ್ವನಾಥ್, ಸಿಪಿಐ ರಾಮಚಂದ್ರಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಗಳ ಶೋಧಕ್ಕೆ ಕ್ರಮ ಜರುಗಿಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಎಸ್ಪಿ ಅನುಪಮ್ ಅಗರ್ವಾಲ್, ಡಿವೈಎಸ್ಪಿ ರಾಮಲಿಂಗಪ್ಪ ಭೇಟಿ ನೀಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.