ಮರಕ್ಕೆ ಕಾರು ಡಿಕ್ಕಿ; ಚಾಲಕ ಸಾವು
ಉಪ್ಪಿನಂಗಡಿ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಯಾತ್ರಾರ್ಥಿಗಳು ಗಾಯಗೊಂಡ ಘಟನೆ ಇಲ್ಲಿಗೆ ಸಮೀಪದ ಉದನೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾನುವಾರ ಮುಂಜಾನೆ ಸಂಭವಿಸಿದೆ.
ರಾಮನಗರ ಜಿಲ್ಲೆಯ ಹಾರವಳ್ಳಿ ನಿವಾಸಿ ಲೋಕೇಶ್ (24) ಮೃತ ವ್ಯಕ್ತಿ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ರಾತ್ರಿ ಪ್ರಯಾಣ ಬೆಳೆಸಿದ ಕಾರಣ, ಭಾನುವಾರ ನಸುಕಿನಲ್ಲಿ ಚಾಲಕ ನಿದ್ದೆ ಮಂಪರಿಗೆ ಒಳಗಾಗಿದ್ದು, ಕಾರು ನಿಯಂತ್ರಣಕ್ಕೆ ಸಿಗದೇ ಹೆದ್ದಾರಿಯಿಂದ 20 ಅಡಿ ದೂರದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ.
ಗಾಯಾಳುಗಳನ್ನು ಬೆಂಗಳೂರಿನ ಹೆಬ್ಬಗೋಡಿಯ ಎಲೆಕ್ಟ್ರಾನಿಕ್ ಸಿಟಿ ಹೊಸೂರು ರಸ್ತೆ ವಿನಾಯಕ ನಗರದ ನಿವಾಸಿಗಳಾದ ಅನಿತಾ (15), ಮಂಜುಳಾ (30), ಮಹಾಲಕ್ಷ್ಮಿ (6), ಚಂದ್ರಕಲಾ (28), ಶೋಭಾ (29), ರಘು (22) ಎನ್ನಲಾಗಿದ್ದು, ಇವರೆಲ್ಲಾ ಒಂದೇ ಕುಟುಂಬದ ಸದಸ್ಯರಾಗಿದ್ದಾರೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಾಳುಗಳ ಪೈಕಿ ಮಂಜುಳಾ, ಚಂದ್ರಕಲಾ ಎಂಬವರ ಕೈಮುರಿತಕ್ಕೊಳಗಾಗಿದೆ ಎನ್ನಲಾಗಿದೆ. ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

