ಚಾಮುಂಡೇಶ್ವರಿ ಕರಗ ಮಹೋತ್ಸವ
ರಾಮನಗರ: ಸುಮಾರು 300 ವರ್ಷಗಳ ಐತಿಹಾಸಿಕ ಹಿನ್ನೆಲೆಯುಳ್ಳ ನಗರದ ಶಕ್ತಿದೇವತೆ ಚಾಮುಂಡೇಶ್ವರಿ ಅಮ್ಮನವರ ಕರಗ ಮಹೋತ್ಸವಕ್ಕೆ ಚಾಲನೆ ದೊರೆಯಿತು. ನಗರವು ವಿಶೇಷ ದೀಪಾಲಂಕಾರದಿಂದ ನವವಧುವಿನಂತೆ ಕಂಗೊಳಿಸುತ್ತಿತ್ತು.
ನಗರದಲ್ಲಿರುವ ಚಾಮುಂಡೇಶ್ವರಿ ದೇವಾಲಯದಲ್ಲಿರುವ ಅಮ್ಮನವರ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಕರಗ ಮಹೋತ್ಸವದ ಪ್ರಯುಕ್ತ ದೇವಾಲಯದಲ್ಲಿ ಮಂಗಳವಾರ ಇಡೀ ದಿನ ವಿಶೇಷ ಪೂಜೆ ಮತ್ತು ಧಾರ್ಮಿಕ ವಿಧಿ- ವಿಧಾನಗಳು ನಿರಂತರವಾಗಿ ನಡೆದವು. ಮಂಗಳವಾರ ಬೆಳಗಿನ ಜಾವದಿಂದಲೇ ಸಾವಿರಾರು ಸುಮಂಗಲಿಯರು ತಂಬಿಟ್ಟಿನ ಆರತಿಯೊಂದಿಗೆ ದೇವಾಲಯಕ್ಕೆ ಆಗಮಿಸಿ, ಆರತಿ ಬೆಳಗುವ ಮೂಲಕ ಭಕ್ತಿ ಸಮರ್ಪಿಸಿಕೊಂಡರು. ಹರಕೆ ಹೊತ್ತ ಭಕ್ತರು ದೇವಾಲಯದ ಮುಂಭಾಗದಲ್ಲಿ ನಿರ್ಮಿಸಿರುವ ಅಗ್ನಿಕೊಂಡಕ್ಕೆ ತಾಲೂಕಿನ ವಿವಿಧ ಭಾಗಗಳಿಂದ ಎತ್ತಿನಗಾಡಿ, ಟ್ರ್ಯಾಕ್ಟರ್‌ಗಳಲ್ಲಿ ಸೌದೆ ತರುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಈ ಕರಗ ಮಹೋತ್ಸವವು ರಾತ್ರಿಯಿಡೀ ನಗರದ ವಿವಿಧ ಬಡಾವಣೆಗಳಲ್ಲಿ ಮೆರವಣಿಗೆ ಮೂಲಕ ಸಾಗಿತು. ಪ್ರತಿ ಮನೆಯಲ್ಲಿಯೂ ಕರಗ ಹೊತ್ತವರಿಗೆ ಪೂಜೆ ಸಲ್ಲಿಸಿ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

