ಕಾಂಗ್ರೆಸ್ ಪಾದಯಾತ್ರೆ ಪ್ರಚಾರ
ಕನಕಪುರ: ರಾಮನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸಂಭವನೀಯ ಅಭ್ಯರ್ಥಿ ಮರಿದೇವರು ಕನಕಪುರ ತಾಲೂಕಿನ ಟಿ.ಹೊಸಹಳ್ಳಿ ಗ್ರಾಪಂ ವ್ಯಾಪ್ತಿಯ ಬಳೇಚನ್ನವಲಸೆ ಗ್ರಾಮದಲ್ಲಿ ಪಾದಯಾತ್ರೆ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದರು. ಈ ಸಂದರ್ಭದಲ್ಲಿ ಅವರು ಶಾಸಕ ಕೆ.ರಾಜು ವಿರುದ್ಧ ಆರೋಪಗಳ ಸುರಿಮಳೆ ಸುರಿಸಿದರು.
ರಾಮನಗರ ಕ್ಷೇತ್ರವ್ಯಾಪ್ತಿಯ ಹಾರೋಹಳ್ಳಿ ಮರಳವಾಡಿ ಹೋಬಳಿಗಳಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆಯಿದ್ದು, ಈ ಭಾಗದ ಸಂಸದರು, ಶಾಸಕರು, ಜಿಪಂ ಸದಸ್ಯರೆಲ್ಲರೂ ಜೆಡಿಎಸ್ ಪಕ್ಷದವರಾಗಿದ್ದರೂ ನೀರಿನ ಸಮಸ್ಯೆ ನೀಗಿಸಲು ಪ್ರಯತ್ನಿಸಿಲ್ಲ ಎಂದು ಆರೋಪಿಸಿದರು.
ಈ ನಿಟ್ಟಿನಲ್ಲಿ ಮರಳವಾಡಿ ಹೋಬಳಿಯಲ್ಲಿ ನೀರಿನ ಸಮಸ್ಯೆ ನೀಗಿಸಲು ತಾತ್ಕಾಲಿಕವಾಗಿ ಮೂರು ನೀರಿನ ಟ್ಯಾಂಕರ್ ಒದಗಿಸುತ್ತಿರುವುದಾಗಿ ತಿಳಿಸಿದರು.
ಮುಖಂಡರಾದ ಗೀತಾಈಶ್ವರ್, ವಿಶ್ವಪ್ರಿಯ, ವೆಂಕಟೇಶಯ್ಯ, ಸಬ್ದರ್ ಹುಸೇನ್ ಮತ್ತಿತರರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

