ಪರಿಸರ ರಕ್ಷಣೆ ಪ್ರತಿಯೊಬ್ಬರ ಹೊಣೆ
ಮಂಡ್ಯ: ಪರಿಸರ ರಕ್ಷಣೆಗೆ ಪ್ರತಿಯೊಬ್ಬರೂ ಕೈ ಜೋಡಿಸಿದರೆ ಮಾತ್ರ ಉತ್ತಮ ಪರಿಸರ ನಿರ್ಮಾಣ ಮಾಡಲು ಸಾಧ್ಯ ಎಂದು ಲಯನ್ಸ್ ಸಂಸ್ಥೆಯ ಅಧ್ಯಕ್ಷ ಮಾದಯ್ಯ ತಿಳಿಸಿದರು.
ನಗರದ ಶಂಕರನಗರ ಸ್ಮಶಾನದಲ್ಲಿ ಮಂಡ್ಯ ಲಯನ್ಸ್ ಸಂಸ್ಥೆ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ಪರಿಸರ ರಕ್ಷಣೆ ದೃಷ್ಟಿಯಿಂದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಾನವನ ದುರಾಸೆಯಿಂದ ಅರಣ್ಯಗಳು ನಾಶವಾಗುತ್ತಿವೆ. ಇದು ಮುಂದುವರೆದರೆ ಮುಂದೊಂದು ದಿನ ದೊಡ್ಡ ಗಂಡಾಂತರವನ್ನೇ ಎದುರಿಸಬೇಕಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರು ಸಸಿಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕು ಎಂದು ಕರೆ ನೀಡಿದರು.
ಪ್ರಕೃತಿಯ ಮೇಲಿನ ನಿರಂತರ ದೌರ್ಜನ್ಯದಿಂದಾಗಿ ಇಂದು ಪ್ರಕೃತಿ ವಿಕೋಪಗಳು ನಡೆಯುತ್ತಿವೆ. ಇದರಿಂದಾಗಿ ಸಹಸ್ರಾರು ಮಂದಿ ಜೀವಕಳೆದುಕೊಳ್ಳುವುದರ ಜೊತೆಗೆ ಅಪಾರ ಪ್ರಮಾಣದ ಆಸ್ತಿ-ಪಾಸ್ತಿಯೂ ನಷ್ಟವಾಗುತ್ತಿದೆ. ಇದಕ್ಕೆಲ್ಲಾ ಪರಿಸರದ ಅಸಮತೋಲನವೇ ಕಾರಣ ಎಂದು ಹೇಳಿದರು. ಈ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿ ಮಹಮದ್ ಜಾಫರ್, ಲಯನ್ಸ್ ಸಂಸ್ಥೆಯ ಪ್ರಾಂತೀಯ ಅಧ್ಯಕ್ಷ ನಾರಾಯಣಸ್ವಾಮಿ, ಪದಾಧಿಕಾರಿಗಾಳ ಮಲ್ಲೇಶ್, ಸತೀಶ್, ನಾಗೇಂದ್ರ, ಶಂಕರೇಗೌಡ, ಚಿಕ್ಕಣ್ಣ, ಮಹೇಶ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

