ವಿದ್ಯಾಲಯಕ್ಕೆ ಅರ್ಜಿ ಆಹ್ವಾನ
ಚನ್ನಪಟ್ಟಣ: ತಾಲೂಕಿನ ಮತ್ತೀಕೆರೆ ಆದರ್ಶ ವಿದ್ಯಾಲಯಕ್ಕೆ 2014-15ನೇ ಸಾಲಿಗೆ 7,8,9 ಹಾಗೂ 10ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದ ಮಾರ್ಗಸೂಚಿಯಂತೆ ಆಯ್ಕೆ ಮಾಡಲಿದ್ದು, 10ನೇ ತರಗತಿಯಲ್ಲಿ 10 ಸೀಟು, 9ನೇ ತರಗತಿಯಲ್ಲಿ 4 ಸೀಟು, 8ನೇ ತರಗತಿಯಲ್ಲಿ5 ಸೀಟು ಹಾಗೂ 7ನೇ ತರಗತಿಯಲ್ಲಿ 12 ಸೀಟುಗಳನ್ನು ಭರ್ತಿ ಮಾಡಲಾಗುವುದು. ಖಾಲಿ ಇರುವ ಸೀಟುಗಳನ್ನು ಭರ್ತಿ ಮಾಡಲು ಆಯಾ ವರ್ಷಗಳಲ್ಲಿ ಕ್ರಮವಾಗಿ ಆದರ್ಶ ವಿದ್ಯಾಲಯದ ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಪೋಷಕರು ಜು.5ರೊಳಗೆ ನೋಂದಾಯಿಸಲು ಕ್ಷೇತ್ರ ಶಿಕ್ಷಣಾಧಿಕಾರಿ ಸೂಚಿಸಿದ್ದಾರೆ.
ಕುಡಿಯುವ ನೀರಿಗೆ
ಹಾಹಾಕಾರ: ಪ್ರತಿಭಟನೆ
ಕನಕಪುರ: ತಾಲೂಕಿನ ಮರಳವಾಡಿ ಗ್ರಾಮದ ಒಂದನೇ ವಾರ್ಡನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು ಕೂಡಲೇ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಗ್ರಾಪಂ ಕಚೇರಿ ಮುಂಭಾಗ ಖಾಲಿಕೊಡಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಕಳೆದ 15 ದಿನಗಳಿಂದಲೂ ಕುಡಿಯುವ ನೀರು ಪೂರೈಕೆಯಾಗದೆ ಜನರು ಪರಿತಪಿಸುವಂತಾಗಿದೆ, ಜನಪ್ರತಿನಿಧಿಗಳಾಗಲೀ ತಾಲೂಕು ಪಂಚಾಯತ್ ಅಥವಾ ತಾಲೂಕು ಆಡಳಿತವಾಗಲೀ ಗಮನ ಹರಿಸದೆ ನಿರ್ಲಕ್ಷ್ಯ ತೋರುತ್ತಿವೆ. ಇದರೊಂದಿಗೆ ವಿದ್ಯುತ್ ಕೂಡಾ ಜನರೊಂದಿಗೆ ಕಣ್ಣಾಮುಚ್ಚಾಲೆಯಾಡುತ್ತಿದೆ. ಯಾವುದೇ ಮುನ್ಸೂಚನೆಯಿಲ್ಲದೆ ವಿದ್ಯುತ್ ಕಡಿತ ಉಂಟಾಗುತ್ತಿದೆ. ಸಂಬಂಧಪಟ್ಟವರು ಕೂಡಲೇ ಗಮನಹರಿಸಿ ಸಮಸ್ಯೆಗಳನ್ನು ನೀಗಿಸಬೇಕೆಂದು ಪ್ರತಿಭಟನಾನಿರತ ಸಾರ್ವಜನಿಕರು ಆಗ್ರಹಿಸಿದರು.
ಹತ್ಯಾಚಾರ: ಮತ್ತೊಬ್ಬ ಆರೋಪಿ ಸೆರೆ
ಚನ್ನಪಟ್ಟಣ: ತಾಲೂಕಿನ ವಂದಾರಗುಪ್ಪೆ ಗ್ರಾಮದ ಬಾಲಕಿಯ ಮೇಲಿನ ಹತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿ ಬೀಸೇಗೌಡನನ್ನು ಮಂಗಳವಾರ ರಾತ್ರಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಬಂಧಿತರಾಗಿರುವ ಆರೋಪಿಗಳಾದ ರಾಜಣ್ಣ ಮತ್ತು ರತ್ನಮ್ಮರನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ಪಡೆಯಲಾಗಿದ್ದು, ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರ ಗೊಳಿಸಿದ್ದಾರೆ.
ಹಾವು ಕಚ್ಚಿ ಮಹಿಳೆ ಸಾವು
ಚನ್ನಪಟ್ಟಣ: ಹುಲ್ಲುಕುಯ್ಯವಾಗ ಹಾವು ಕಡಿದು ಮಹಿಳೆ ಸಾವಿಗೀಡಾಗಿರುವ ಘಟನೆ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ಸಾವಿತ್ರಮ್ಮ (45) ಮೃತ ದುರ್ದೈವಿ. ತಮ್ಮ ಹೊಲದಲ್ಲಿ ಹುಲ್ಲು ಕೊಯ್ಯುತ್ತಿರುವಾಗ ಹಾವು ಕಚ್ಚಿದೆ. ತಕ್ಷಣ ಪಟ್ಟಣದ ಸಾರ್ವಜನಿಕ
ಆಸ್ಪತ್ರೆಗೆ ಕರೆತರಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವಿಗೀಡಾಗಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದೂರು ದಾಖಲಿಸಿ ಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

